ವಿಜಯಪುರ:– ಯಾದಗಿರಿ ಪಿಎಸ್ಐ ಅನುಮಾನಾಸ್ಪದ ಸಾವು ಕೇಸ್ ಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ
ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್: ಚಿನ್ನದ ಬೆಲೆ ಗ್ರಾಮ್ಗೆ 150 ರೂಗೂ ಅಧಿಕ ಹೆಚ್ಚಳ!
ಸರ್ಕಾರದಲ್ಲೇ ದಲಿತರ ಹತ್ಯೆಗಳು ಹೆಚ್ಚಾಗುತ್ತಿದೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಅಧಿಕಾರಿ ಆತ್ಮಹತ್ಯೆಗೆ ಶರಣಾದ. ಈಗ ಪಿಎಸ್ಐ ಪರಶುರಾಮ ಮೃತಪಟ್ಟಿದ್ದಾನೆ. ಪಿಎಸ್ಐ ಸಾವಿಗೆ ಕಾಂಗ್ರೆಸ್ ಶಾಸಕರ ಭ್ರಷ್ಟಾಚಾರವೇ ಕಾರಣ. ಪೊಲೀಸ್ ಅಧಿಕಾರಿಗಳೇ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಮಾತ್ರ ರಾಜೀನಾಮೆ ನೀಡಿದರೆ ಸಾಲದು. ಸಿಎಂ ರಾಜೀನಾಮೆ ಕೊಟ್ಟರೆ ಡಿಕೆ ಶಿವಕುಮಾರ್ ಸಿಎಂ ಆಗಲು ಅನುಕೂಲವಾಗುತ್ತೆ. ಹಾಗಾಗಿ ವಿಧಾನಸಭೆಯನ್ನು ವಿಸರ್ಜನೆ ಮಾಡಬೇಕು. ಮತ್ತೆ ಚುನಾವಣೆಗೆ ಹೋಗೋಣ ಎಂದು ಯತ್ನಾಳ್ ಹೇಳಿಕೆ ನೀಡಿದ್ದಾರೆ.