ಬೆಂಗಳೂರು:– ಇಂದು ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಹಾಗೂ ಯೆಲ್ಲೋ ಎಚ್ಚರಿಕೆಯನ್ನು ನೀಡಲಾಗಿದೆ.
ಮಹಿಳಾ ಇನ್ಸ್ಪೆಕ್ಟರ್ ಜತೆ ಸರಸ: ರೆಡ್ ಹ್ಯಾಂಡ್ ಆಗಿ ಲಾಕ್ ಮಾಡಿದ ಹೆಂಡತಿ; ಮುಂದೇನಾಯ್ತು!?
ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಪ್ರತ್ಯೇಕವಾಗಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ದಾವಣಗೆರೆ, ಕೋಲಾರ, ವಿಜಯನಗರದಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ
ಉತ್ತರ ಒಳನಾಡಿನ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆಯಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ಬೀಸಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ