ಬೆಂಗಳೂರು: ಕಳೆದ ವರ್ಷ ಮಧ್ಯ ಭಾಗದಲ್ಲಿ ರೇಷನ್ ಕಾರ್ಡ್ ತಿದ್ದುಪಡಿಗೆ ಸಾಕಷ್ಟು ಬಾರಿ ಸರ್ಕಾರ ಅವಕಾಶ ನೀಡಿತ್ತು. ಆದರೆ, ಸರ್ವರ್ ಸಮಸ್ಯೆಯಿಂದ ಫಲಾನುಭವಿಗಳಿಗೆ ತಿದ್ದುಪಡಿ ಸಾಧ್ಯವಾಗುತ್ತಿರಲಿಲ್ಲ. ಇನ್ನು ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸುವುದಕ್ಕೂ ಸಾಕಷ್ಟು ಮಂದಿ ಕಾಯುತ್ತಿದ್ದರೂ ಸರ್ಕಾರ ಅವಕಾಶ ನೀಡಿರಲಿಲ್ಲ. ಆದರೆ ಈಗ ರೇಷನ್ ಕಾರ್ಡ್ ತಿದ್ದುಪಡಿಗೆ ಕರ್ನಾಟಕ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯು ಅವಕಾಶ ನೀಡಿದೆ.
ಆಗಸ್ಟ್ 10 ಕೊನೆಯ ದಿನವಾಗಿದ್ದು,( ನಾಳೆಯೇ ಕೊನೆ ದಿನ) ಅಷ್ಟರೊಳಗೆ ಅರ್ಜಿ ಸಲ್ಲಿಸಿ ಬದಲಾವಣೆ ಮಾಡಿಕೊಳ್ಳಬಹುದು. ಈ ಕುರಿತು ಮಾಹಿತಿ ನೀಡಿರುವ ಇಲಾಖೆಯು, ಪಡಿತರ ಚೀಟಿ (ರೇಷನ್ ಕಾರ್ಡ್) ಹೊಂದಿರುವವರು ಅದರಲ್ಲಿ ತಿದ್ದುಪಡಿ ಮಾಡಿಕೊಳ್ಳುವ ಸಂಬಂಧ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 10 ರವರೆಗೆ,( ನಾಳೆಯೇ ಕೊನೆ ದಿನ) ಅವಕಾಶವಿದೆ. ರೇಷನ್ ಕಾರ್ಡುದಾರರು ಈ ಸೌಲಭ್ಯವನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ.
ಖಾಲಿ ಹೊಟ್ಟೆಯಲ್ಲಿ ಹಸಿ ಬೆಳ್ಳುಳ್ಳಿ ತಿನ್ನುವುದರಿಂದ ಸಿಗುವ ಪ್ರಯೋಜನಗಳೇನು ಗೊತ್ತಾ..?
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ರೇಷನ್ ಕಾರ್ಡ್ ಮುಖ್ಯ. ಅಲ್ಲದೆ ಸರ್ಕಾರದ ಯಾವುದೇ ಯೋಜನೆಗಳನ್ನು ಪಡೆಯಲು ರೇಷನ್ ಕಾರ್ಡ್ ಮುಖ್ಯವಾಗಿದೆ. ಹೀಗಾಗಿ ಹಲವು ಜನ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಗಾಗಿ ಕಾಯುತ್ತಿದ್ದರು. ಇದೀಗ ಆಹಾರ ಇಲಾಖೆ ಸಿಹಿಸುದ್ದಿ ನೀಡಿದೆ. ಹೌದು, ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಆಗಸ್ಟ್ 10 ರವರೆಗೆ ,( ನಾಳೆಯೇ ಕೊನೆ ದಿನ) ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಆಗಸ್ಟ್ 10 ರ ವರೆಗೆ,( ನಾಳೆಯೇ ಕೊನೆ ದಿನ) ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ.
ಯಾವೆಲ್ಲಾ ದಾಖಲೆಗಳು ಬೇಕು?
ಅರ್ಜಿದಾರರು ಆಧಾರ್ ಕಾರ್ಡ್ ಪ್ರತಿ, ಹೊಸ ಹೆಸರು ಸೇರ್ಪಡೆಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಮೊಬೈಲ್ ಸಂಖ್ಯೆ, ಹಾಲಿ ಪಡಿತರ ಚೀಟಿ ದಾಖಲೆ ಇಟ್ಟುಕೊಂಡಿರಬೇಕು.
ಎಲ್ಲಿ ತಿದ್ದುಪಡಿಗೆ ಅವಕಾಶ?
ತಿದ್ದುಪಡಿ ಮಾಡಿಕೊಳ್ಳುವವರು ಹತ್ತಿರವಿರುವ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಕ್ಕೆ ಅಗತ್ಯ ದಾಖಲೆಯೊಂದಿಗೆ ತೆರಳಿ ಆನ್ಲೈನ್ ಅರ್ಜಿ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬೇಕು. ಆಗಸ್ಟ್ 10 ರವರೆಗೆ ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ತಿದ್ದುಪಡಿಗೆ ಅವಕಾಶವಿದೆ. ಕೇವಲ ಅನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದು. ಯಾವುದೆ ಕೈಬರಹ ಹಾಗೂ ಮುದ್ರಿತ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಇಲಾಖೆ ತಿಳಿಸಿದೆ.
ವಿದ್ಯುತ್ ಬಿಲ್ ದಾಖಲೆ ನೀಡಬೇಕು
ಪಡಿತರ ಚೀಟಿ ತಿದ್ದುಪಡಿ ಮಾಡಿರುವವರು ಇತ್ತೀಚಿನ ವಿದ್ಯುತ್ ಬಿಲ್ಲಿನಲ್ಲಿ ನಮೂದಿಸಿರುವ ವಿದ್ಯುತ್ ಮೀಟರ್ ಆರ್ಆರ್ ಸಂಖ್ಯೆ ಮತ್ತು ಲೊಕೇಷನ್ ಕೋಡ್ ನೀಡುವುದು ಕಡ್ಡಾಯ ಮಾಡಲಾಗಿದೆ. ವಿದ್ಯುತ್ ಸಂಪರ್ಕ ನಿಮ್ಮ ಕುಟುಂಬದ ಯಾರೇ ಸದಸ್ಯರ ಹೆಸರಿನಲ್ಲಿರಲು ಅಥವಾ ನಿಮ್ಮ ಮನೆ ಮಾಲೀಕರ ಹೆಸರಿನಲ್ಲಿರಲಿ, ಅದೇ ಆರ್.ಆರ್ ನಂಬರ್ ನೀಡುವುದು ಕಡ್ಡಾಯವಾಗಿದೆ. ಮನೆಗೆ ವಿದ್ಯುತ್ ಇಲ್ಲದವರು ತಮಗೆ ವಿದ್ಯುತ್ ಸಂಪರ್ಕ ಇಲ್ಲ / ತಮ್ಮ ಮನೆಗೆ ಅಧಿಕೃತ ವಿದ್ಯುತ್ ಮೀಟರ್ ಇಲ್ಲ / ತಮ್ಮದು ಭಾಗ್ಯಜ್ಯೋತಿ´ ಸಂಪರ್ಕ / ತಮ್ಮದು ಗ್ರೂಪ್ ಕ್ವಾರ್ಟರ್ಸ್ ಆಗಿದ್ದು ಎಲ್ಲರಿಗೂ ಸಾಮನ್ಯ ಮೀಟರ್ ಇದೆ. ಹೀಗೆ ನಿಮ್ಮ ಮನೆಯ ವಿದ್ಯುತ್ ವ್ಯವಸ್ಥೆ ಬಗ್ಗೆ ಸ್ಪಷ್ಟವಾಗಿ ಘೋಷಿಸಬೇಕು ಎಂದು ಇಲಾಖೆ ಸೂಚಿಸಿದೆ.