ಮೈಸೂರು:- ಇಂದು ಮೈತ್ರಿ ಪಾದಯಾತ್ರೆಗೆ ತೆರೆ ಬೀಳಲಿದ್ದು, ಮೈಸೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಸಮಾರೋಪ ಸಮಾವೇಶ ನಡೆಯಲಿದೆ.
ಮೈಸೂರಿನ ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣಗಳಲ್ಲಿ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ʼಮೈಸೂರು ಚಲೋʼ ಪಾದಯಾತ್ರೆಯನ್ನು ಒಂದು ವಾರದಿಂದ ನಡೆಸುತ್ತಿರುವ ಬಿಜೆಪಿ- ಜೆಡಿಎಸ್, ಅಂತಿಮ ಘಟ್ಟ ತಲುಪಿವೆ. ಪಾದಯಾತ್ರೆ ಮೈಸೂರು ತಲುಪುವ ಮುನ್ನ ಸಿಎಂ ರಾಜೀನಾಮೆ ನೀಡಬೇಕು. ಇಲ್ಲವಾದರೆ ಇನ್ನಷ್ಟು ಉಗ್ರ ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಗ್ರಹಿಸಿದ್ದರು.
ಭೂಕುಸಿತ: ಇಂದು ವಯನಾಡಿಗೆ ಪ್ರಧಾನಿ ಭೇಟಿ: ಸಂತ್ರಸ್ತರ ಸಂಕಷ್ಟ ಆಲಿಸಲಿದ್ದಾರೆ “ನಮೋ”!
ಇಂದು ಮೈಸೂರು ನಗರದಲ್ಲಿ ದೋಸ್ತಿ ಪಕ್ಷಗಳ ಪಾದಯಾತ್ರೆ ನಡೆಯಲಿದೆ. ಕೊಲಂಬಿಯಾ ಏಷಿಯಾ ಜಂಕ್ಷನ್ನಿಂದ ಪಾದಯಾತ್ರೆ ಬೆಳಗ್ಗೆ 9.30ಕ್ಕೆ ಪ್ರಾರಂಭವಾಗಲಿದ್ದು, ಬೆಳಗ್ಗೆ 11.30ಕ್ಕೆ ಮಹಾರಾಜ ಕಾಲೇಜು ಮೈದಾನದಲ್ಲಿ ಜಮಾವಣೆಯಾಗಲಿದೆ. ಬೃಹತ್ ಸಮಾವೇಶದ ಮೂಲಕ ಪಾದಯಾತ್ರೆಗೆ ತೆರೆ ಬೀಳಲಿದೆ. ಅಂದಾಜು 1 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ.
ಸಮಾವೇಶದಲ್ಲಿ ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಸೇರಿದಂತೆ ಪ್ರಮುಖರು ಭಾಗಿಯಾಗಲಿದ್ದಾರೆ.