ಜಮ್ಮು ಕಾಶ್ಮೀರ: ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದು ಮೂವರು ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ದೂರದ ಅರಣ್ಯ ಪ್ರದೇಶದಲ್ಲಿ ಶನಿವಾರ ಕಾಡಿನಲ್ಲಿ ಅಡಗಿಕೊಂಡಿದ್ದ ಭಯೋತ್ಪಾದಕರು ಸೈನಿಕರನ್ನು ಗಮನಿಸಿ ಮನಬಂದಂತೆ ಗುಂಡು ಹಾರಿಸಿದರು, ಇದು ತೀವ್ರ ಗುಂಡಿನ ಕಾಳಗಕ್ಕೆ ಕಾರಣವಾಯಿತು.
Dog Meat: ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ; ಹೈದರಾಬಾದ್ ಲ್ಯಾಬ್ ವರದಿ!
ದಾಳಿಯಲ್ಲಿ ಐವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ದುರದೃಷ್ಟವಶಾತ್, ಗಾಯಗೊಂಡ ಇಬ್ಬರು ಸಿಬ್ಬಂದಿ ನಂತರ ಸಾವನ್ನಪ್ಪಿದ್ದಾರೆ.
ವಿದೇಶಿಯರು ಎಂದು ಶಂಕಿಸಲಾದ ಭಯೋತ್ಪಾದರನ್ನು ಮಟ್ಟಹಾಕಲು ಸೇನೆಯ ವಿಶೇಷ ಪಡೆಗಳು, ಪ್ಯಾರಾಟ್ರೂಪರ್ಗಳು ಕಾರ್ಯಾಚರಣೆಯಲ್ಲಿದ್ದಾರೆ. ಕಳೆದ ಒಂದು ವರ್ಷದಲ್ಲಿ ಕೋಕರ್ನಾಗ್ನಲ್ಲಿ ನಡೆದ ಎನ್ಕೌಂಟರ್ ಬಿಟ್ಟರೆ, ಇದು ಎರಡನೇ ಪ್ರಮುಖ ಗುಂಡಿನ ಚಕಮಕಿಯಾಗಿದೆ.
ಸೆಪ್ಟೆಂಬರ್ 2023 ರಲ್ಲಿ, ಕೋಕರ್ನಾಗ್ ಅರಣ್ಯದಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಕಮಾಂಡಿಂಗ್ ಆಫೀಸರ್, ಮೇಜರ್ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ಹುತಾತ್ಮರಾಗಿದ್ದರು. ಅನಂತನಾಗ್ ಜಿಲ್ಲೆಯ ಕೊಕರ್ನಾಗ್ನ ಅಹ್ಲಾನ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ನಡೆಯುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಭಯೋತ್ಪಾದಕ ಗುಂಡಿನ ದಾಳಿಗೆ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಅವರಿಗೆ ತಕ್ಷಣದ ವೈದ್ಯಕೀಯ ನೆರವು ಒದಗಿಸಲಾಗಿದೆ.