ಬೆಂಗಳೂರು:- ಜರ್ನಲಿಸಂ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಹತ್ತು ಹಲವು ಕಾರ್ಯಕ್ರಮಗಳ ಮೂಲಕ ಪತ್ರಕರ್ತರ ಕೌಶಲ್ಯಾಭಿವೃದ್ಧಿಗೆ ಶ್ರಮಿಸುತ್ತಿದೆ. ಸರ್ಕಾರದಿಂದ ಪುನಾರಚಿತಗೊಂಡಿರುವ ಸಮಿತಿ ಹೊಸ ಹೊಸ ಕಾರ್ಯಕ್ರಮಗಳ ಮೂಲಕ ಅಕಾಡೆಮಿಗೆ ಹೊಸ ರೂಪ ನೀಡುವ ನಿಟ್ಟಿನಲ್ಲಿ ಹೆಜ್ಜೆಯನ್ನಿಟ್ಟಿದೆ.
Citizenship Amendment Act: ಕರ್ನಾಟಕದಲ್ಲಿದ್ದ ಐವರು ಬಾಂಗ್ಲಾ ನಿರಾಶ್ರಿತರಿಗೆ ಭಾರತೀಯ ಪೌರತ್ವ!
ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ಪದವಿ ಮುಗಿಸಿ ಹೊರ ಬರುವ ವಿದ್ಯಾರ್ಥಿಗಳಿಗೆ ಮಾಧ್ಯಮ ಕಚೇರಿಯ ಎಲ್ಲಾ ವಿಭಾಗಗಳಲ್ಲಿ ತರಬೇತಿಯನ್ನು ಕೊಡಿಸುವ ಮೂಲಕ, ತರಬೇತಿ ಹೊಂದಿದ ವಿದ್ಯಾರ್ಥಿಗಳು ಪತ್ರಕರ್ತರಾಗುವಂತೆ ಸಿದ್ಧಪಡಿಸುವುದು ಅಕಾಡೆಮಿಯ ಉದ್ದೇಶವಾಗಿದೆ. ಪ್ರಸಕ್ತ ಸಾಲಿನಲ್ಲಿ 5 ಮಂದಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳಲ್ಲಿ 2 ತಿಂಗಳ ಕಾಲ ತರಬೇತಿ ಪಡೆಯಲು ಮಾಸಿಕ ತಲಾ 20,000 ರೂಪಾಯಿ ಶಿಷ್ಯವೇತನ ನೀಡಲಾಗುವುದು.
ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳಾ ವಿದ್ಯಾರ್ಥಿಗಳಿಗೆ ಆಗಸ್ಟ್ 26 ರೊಳಗೆ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಫೋಟೋ ಪ್ರತಿಯನ್ನು ಸ್ಕ್ಯಾನ್ ಮಾಡಿ.
28 ವರ್ಷದೊಳಗಿನ ಮಹಿಳಾ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅಕಾಡೆಮಿಯು ಅರ್ಹತಾ ಪರೀಕ್ಷೆ ನಡೆಸಲಿದೆ. ಈ ಪರೀಕ್ಷೆಯ ದಿನಾಂಕ, ಸ್ಥಳ ಮತ್ತು ಸಮಯವನ್ನು ಸಂದರ್ಶನದ ವೇಳೆ ತಿಳಿಸಲಾಗುವುದು.