ನೆಲಮಂಗಲ:- ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ಕುಲುವನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಟೆಂಪೊದಲ್ಲಿದ್ದ ಮೂವರು ದುರ್ಮರಣ ಹೊಂದಿದ್ದಾರೆ.
ನರಸಪ್ಪ(35), ಹುಸೇನಪ್ಪ(34), ಪಾದಚಾರಿ ತುಮಕೂರು ತಾಲೂಕಿನ ಸೀತಕಲ್ಲು ನಿವಾಸಿ ಶಿವಗಂಗಪ್ಪ(55) ಮೃತರು. ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟೆಂಪೊದಲ್ಲಿ ತೆರಳುತ್ತಿದ್ದ ಯಾದಗಿರಿ ಮೂಲದ ಲಕ್ಷ್ಮೀ, ಭಾನುಪ್ರಿಯಾ, ಅನಂತಪ್ಪ, ನಾಗರಾಜು, ಮೂವರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಬಂಗಾರಪ್ಪ ಸ್ಥಿತಿ ಗಂಭೀರವಾಗಿದ್ದು, ಸಾಬಣ್ಣ, ಕಟ್ಟಪ್ಪಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೂವರು ಗಾಯಾಳುಗಳನ್ನು ನೆಲಮಂಗಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.