ಬೆಂಗಳೂರು: ಮಧ್ಯರಾತ್ರಿಯಿಂದ ಬೆಳಗ್ಗೆವರೆಗೂ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ರಾಜಧಾನಿಯ ಹಲವು ರಸ್ತೆಗಳು ಕೆಸರು ಮಯವಾಗಿವೆ. ನೀರು ನಿಂತು ಅಂಡರ್ಪಾಸ್ಗಳು ಜಲಾವೃತಗೊಂಡಿವೆ. ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಮುಂಭಾಗದ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ.
ಹಿಂಡೆನ್ಬರ್ಗ್ ವರದಿ: ಮೋದಿ ಹೆದರುತ್ತಿದ್ದಾರೆ; ಪ್ರಧಾನಿ ಟೀಕಿಸಿದ ರಾಹುಲ್ ಗಾಂಧಿ!
ಮೆಜೆಸ್ಟಿಕ್, ಓಕಳಿಪುರ, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ಕೋರಮಂಗಲ, ವಿಧಾನಸೌಧ, ಶಿವಾಜಿನಗರ, ಕಾರ್ಪೊರೇಷನ್ ಸರ್ಕಲ್, ಟೌನ್ಹಾಲ್, ಕೆ.ಆರ್.ಮಾರ್ಕೆಟ್, ತ್ಯಾಗರಾಜನಗರ, ಜಯನಗರ, ಹನುಮಂತನಗರ, ಶ್ರೀನಗರ, ಮೈಸೂರು ರಸ್ತೆ, ನಾಯಂಡಹಳ್ಳಿ, ಮಾಗಡಿ ರಸ್ತೆ, ವಿಜಯನಗರ, ಕೆಂಗೇರಿ, ಶಿವಾನಂದ ಸರ್ಕಲ್, ಮೇಖ್ರಿ ಸರ್ಕಲ್, ಹೆಬ್ಬಾಳ, ಯಲಹಂಕ, ಕೆ.ಆರ್.ಪುರಂ ಸೇರಿದಂತೆ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ರಸ್ತೆಗಳು ಜಲಾವೃತಗೊಂಡಿವೆ.
ಒಕಳಿಪುರಂನ ಅಂಡರ್ಪಾಸ್ಗೆ ನೀರು ನುಗ್ಗಿ, ವಾಹನ ಸವಾರರು ತಡರಾತ್ರಿ ಹರಸಾಹಸ ಪಡುವ ಸ್ಥಿತಿ ನಿರ್ಮಾಣವಾಗಿತ್ತು.
ಚಿಕ್ಕಪೇಟೆ ಮೆಟ್ರೋ ಸ್ಟೇಷನ್ ಮುಭಾಗದ ರಸ್ತೆ ಮುಳುಗಡೆಯಾಗಿದೆ. ಸುಮಾರು 2 ಅಡಿಯಷ್ಟು ನೀರು ರಸ್ತೆಯಲ್ಲೇ ನಿಂತಿದೆ. ವಾಹನ ಸವಾರರು ಭಯದಲ್ಲಿಯೇ ಸಂಚಾರ ಮಾಡ್ತಿದ್ದಾರೆ. ಇತ್ತ ಕೆ.ಆರ್.ಮಾರ್ಕೆಟ್ನ ರಸ್ತೆಗಳೂ ಕೆಸರುಮಯವಾಗಿದೆ.