ಬೆಂಗಳೂರು: ಮುಖ್ಯಮoತ್ರಿ ಸಿದ್ದರಾಮಯ್ಯ ಅವರು ಸೋಮವಾರ ದಸರಾ ಮಹೋತ್ಸವ 2024 ಉನ್ನತ ಮಟ್ಟದ ಸಮಿತಿ ಸಭೆ ನಡೆಸಿದರು. ವಿಧಾನಸೌಧದಲ್ಲಿ ನಡೆಯುತ್ತಿರುವ ಸಭೆ ಆಗಿದ್ದು ಸರ್ಕಾರದಿಂದ ಎಷ್ಟು ಅನುದಾನ ಬಿಡುಗಡೆ ಮಾಡಬೇಕು ಅನ್ನೋ ಬಗ್ಗೆ ನಿರ್ಧಾರ ಸಾಧ್ಯತೆ.
ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಹೆಚ್.ಸಿ ಮಹದೇವಪ್ಪ, ಕೆ.ಜೆ.ಜಾರ್ಜ್, ಹೆಚ್.ಕೆ. ಪಾಟೀಲ, ಕೆ. ವೆoಕಟೇಶ್, ಮುಖ್ಯಮoತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಭಾಗಿಯಾಗಿದ್ದು
ಹಾಗೆ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಯ ಶಾಸಕರುಗಳು ಹಾಗೂ ಮುಖ್ಯಮoತ್ರಿಯರ ಅಪರ ಮುಖ್ಯ ಕಾರ್ಯದರ್ಶಿಎಲ್.ಕೆ.ಅತೀಕ್ ಸೇರಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.