ಕೊಪ್ಪಳ:- ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ಗೆ ತಾತ್ಕಾಲಿಕ ಗೇಟ್ ಅಳವಡಿಕೆ ಕಾರ್ಯ ಇಂದು ಸಂಜೆಯಿಂದ ಆರಂಭವಾಗಲಿದೆ.
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ಗೇಟ್ ತುಂಡಾಗಿ ನೀರುಪೋಲಾಗುತ್ತಿರುವ ಕಾರಣ ಸದ್ಯ ತಾತ್ಕಾಲಿಕ ಗೇಟ್ ಅಳವಡಿಕೆಗೆ ತುಂಗಭದ್ರಾ ಡ್ಯಾಮ್ ಮಂಡಳಿ ನಿರ್ಧಾರ ಕೈಗೊಂಡಿದೆ.
ಆ.19 ರಿಂದ ಆ. 21ವರೆಗೆ ರಬಕವಿಯ ಮಲ್ಲಿಕಾರ್ಜುನ ದೇವರ ಐತಿಹಾಸಿಕ ಜಾತ್ರೆ
ಜಲಾಯಶಯದ ನೀರು ಖಾಲಿಯಾಗುವ ಮೊದಲೇ ತಾತ್ಕಾಲಿಕ ಗೇಟ್ ಅಳವಡಿಕೆಗೆ ಯತ್ನಿಸಲಾಗುತ್ತಿದೆ. ನೀರಿನಲ್ಲೇ ಗೇಟ್ ಇಳಿಸಿ ತಾತ್ಕಾಲಿಕ ಗೇಟ್ ಅಳವಡಿಕೆಗೆ ತಜ್ಞರ ತಂಡ ಪ್ರಯತ್ನಿಸಲಿದೆ. ತಾತ್ಕಾಲಿಕ ಹೊಸ ಗೇಟ್ ಹೊಸಪೇಟೆ ಮತ್ತು ಹೊಸಳ್ಳಿಯಲ್ಲಿ ತಯಾರಾಗಿದೆ.
ನಾರಾಯಣ ಇಂಜಿನಿಯರ್ಸ್, ಹಿಂದೂಸ್ತಾನ್ ಇಂಜಿನಿಯರ್ಸ್, ಜಿಂದಾಲ್ ತಂತ್ರಜ್ಞರ ತಂಡದಿಂದ ಗೇಟ್ ಅಳವಡಿಕೆ ಕೆಲಸ ನಡೆಯಲಿದೆ. ಗೇಟ್ ಅಳವಡಿಕೆ ಯಶಸ್ವಿಯಾದರೆ ಅಪಾರ ಪ್ರಮಾಣದ ನೀರು ಉಳಿಯಲಿದೆ. ಹೀಗಾಗಿ ತಾತ್ಕಾಲಿಕ ಹೊಸ ಗೇಟ್ ಅಳವಡಿಕೆಗೆ ಡ್ಯಾಮ್ ಮಂಡಳಿ ಮುಂದಾಗಿದೆ.
ಕೊಪ್ಪಳ ತಾಲೂಕಿನ ಮುಶಿರಾಬಾದ್ ಬಳಿಯಿರುವ ತುಂಗಭದ್ರಾ ಡ್ಯಾಮ್ನ 19ನೇ ಕ್ರಸ್ಟ್ ಗೇಟ್ ತುಂಡಾಗಿ ಎರಡು ದಿನದಲ್ಲಿ 14 ಟಿಎಂಸಿ ನೀರು ಹೊರಕ್ಕೆ ಹರಿದುಹೋಗಿದೆ. ಆಗಸ್ಟ್ 10ರಂದು ಡ್ಯಾಮ್ನಲ್ಲಿ ಬರೋಬ್ಬರಿ 105 ಟಿಎಂಸಿ ನೀರು ಸಂಗ್ರಹವಿತ್ತು. ಈ ಜಲಾಶಯ 105.788 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಸದ್ಯ ಡ್ಯಾಂನಲ್ಲಿ 91.979 ಟಿಎಂಸಿ ನೀರು ಸಂಗ್ರಹ ಇದೆ.