ಬೆಂಗಳೂರು: ಸ್ವಾತಂತ್ರ್ಯ ಹೋರಾಟದ ಕುರಿತು ಜನಜಾಗೃತಿಗಾಗಿ ಪ್ರತಿಯೊಂದು ಮನೆಯ ಮೇಲೆ ಭಾರತದ ತ್ರಿವರ್ಣ ಧ್ವಜ ಹಾರಿಸುವ ‘ಹರ್ ಘರ್ ತಿರಂಗಾ’ (Har Ghar Tiranga) ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ (BY Vijayendra) ಅವರು ತಿಳಿಸಿದರು.
ಶಿವಾಜಿನಗರದ (Shivajinagara) ವಸಂತ ನಗರ ವಾರ್ಡಿನ ಬೂತ್ ನಂ.44ರಲ್ಲಿಂದು ಬೆಳಗ್ಗೆ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆಯ (Independence Day) ಶುಭ ಸಂದರ್ಭದಲ್ಲಿ ನಮ್ಮ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು, ಯುವ ಪೀಳಿಗೆಗೆ ಸ್ವಾತಂತ್ರ್ಯ ಸಂಗ್ರಾಮದ ದಿನಗಳನ್ನ ನೆನಪಿಸಿ ಕೊಡಬೇಕು. ತ್ಯಾಗ, ಬಲಿದಾನದ ಚರ್ಚೆ ಆಗಬೇಕು ಎಂದು ತಿಳಿಸಿದ್ದಾರೆ. ಅದಕ್ಕಾಗಿ ಯುವಜನತೆಯಲ್ಲೂ ದೇಶಭಕ್ತಿ ಜಾಗೃತಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ವಿವರಿಸಿದರು.
ಸಂಸದ ಪಿ.ಸಿ.ಮೋಹನ್, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೂತ್ ಸಂಖ್ಯೆ 44ರ ಅಧ್ಯಕ್ಷ ಸಾಗರ್, ಪಕ್ಷದ ಕಾರ್ಯಕರ್ತರ ನೇತೃತ್ವದಲ್ಲಿ ತ್ರಿವರ್ಣ ಧ್ವಜ ಹಾರಿಸಲಾಗಿದೆ. ಅದೇರೀತಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ತಿರಂಗಯಾತ್ರೆ ಆಯೋಜಿಸಲಾಗಿದೆ ಎಂದು ತಿಳಿಸಿದರು. ಯುವಕರಿಂದ ಬೈಕ್ ರ್ಯಾಲಿ ಮೂಲಕ ತಿರಂಗಾ ಯಾತ್ರೆ ನಡೆಸಲಾಗುತ್ತಿದ್ದು, ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ ಎಂದು ಹೇಳಿದರು.