ಶಿವಮೊಗ್ಗ:- ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಅಗಸರಕೋಣೆ ಬಳಿ ಪಿಕಪ್ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಜರುಗಿದೆ.
ಆಘಾತಕಾರಿ ಘಟನೆ: ತಪಾಸಣೆಗೆಂದು ಆಸ್ಪತ್ರೆಗೆ ಬಂದ ರೋಗಿಗಳಿಬ್ಬರ ಮೇಲೆ ಅತ್ಯಾಚಾರ ಮಾಡಿದ ಸರ್ಕಾರಿ ಡಾಕ್ಟರ್!
ಬೈಕ್ನಲ್ಲಿದ್ದ ಓರ್ವ ಹಾಗೂ ಪಿಕಪ್ ವಾಹನದಲ್ಲಿದ್ದ ಸೇರಿ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಗಸರಕೋಣೆ ನಿವಾಸಿ ಶರತ್ ಹಾಗೂ ಕೇರಳದ ಮೂಲದ ವ್ಯಕ್ತಿ ಮೃತ ರ್ದುದೈವಿಗಳು ಎನ್ನಲಾಗಿದೆ.
ಈ ಕುರಿತು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.