ಬೆಂಗಳೂರು:- ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಮುಂದಿನ ವರ್ಷದಿಂದ 50 ಸಾವಿರ ಮಕ್ಕಳಿಗೆ ಸಿಇಟಿ, ನೀಟ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದ್ದಾರೆ.
ವಿನೇಶ್ ಪೋಗಟ್ ಅನರ್ಹ: ತೀರ್ಪು ಮತ್ತಷ್ಟು ವಿಳಂಬ, ಆಗಸ್ಟ್ 16ಕ್ಕೆ ಬೆಳ್ಳಿ ಭವಿಷ್ಯ!
ಈ ಬಗ್ಗೆ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ 2 ಸಾವಿರ ಇಂಗ್ಲಿಷ್ ಮಾಧ್ಯಮ ಶಾಲೆ ತೆರೆಯಲಾಗಿದೆ. 1,008 ಅಂಗನವಾಡಿಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲಾಗಿದೆ. ಮುಂದಿನ ವರ್ಷದ ವೇಳೆಗೆ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು. ನಾಲ್ಕು ವರ್ಷಗಳಲ್ಲಿ ಹಂತ ಹಂತವಾಗಿ ಇಂತಹ 3 ಸಾವಿರ ಶಾಲೆ ತೆರೆಯಲು ಉದ್ದೇಶಿಸಲಾಗಿದೆ. ಇದರಿಂದ 45 ಲಕ್ಷ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದು, ಮುಂದಿನ ದಿನಗಳಲ್ಲಿ ಇನ್ನೂ 10 ಸಾವಿರದಿಂದ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.