ಬೆಂಗಳೂರು:- ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರನ್ನು ಕರ್ನಾಟಕದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಸೇರಿ ಮೂರು ರಾಜ್ಯಗಳ ಮಹಿಳಾ ಕಾಂಗ್ರೆಸ್ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಮಹಿಳಾ ಕಾಂಗ್ರೆಸ್ಗೆ ಸೌಮ್ಯಾ ರೆಡ್ಡಿ, ಚಂಡೀಗಢಕ್ಕೆ ನಂದಿತಾ ಹೂಡ, ಅರುಣಾಚಲ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಚುಕು ನಾಚಿ ನೇಮಕವಾಗಿದ್ದಾರೆ.
ಸೌಮ್ಯಾ ರೆಡ್ಡಿ ಅವರು 2018ರ ವಿಧಾನಸಭೆ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. 2023ರ ಚುನಾವಣೆಯಲ್ಲಿ ಕೇವಲ 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಸಿ.ಕೆ. ರಾಮಮೂರ್ತಿ ಎದುರು ಸೋತಿದ್ದರು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಕೈ ಅಭ್ಯರ್ಥಿ ಸೌಮ್ಯಾ ರೆಡ್ಡಿ ಸೋಲು ಕಂಡಿದ್ದರು ಎನ್ನಲಾಗಿದೆ.