ಬೆಂಗಳೂರು: ‘ಅನ್ನಭಾಗ್ಯ’ ಯೋಜನೆಯಡಿ ಫಲಾನುಭವಿಗಳಿಗೆ ಸದ್ಯ 5 ಕೆಜಿ ಅಕ್ಕಿ ಬದಲಿಗೆ ಹಣ ವರ್ಗಾವಣೆ ಮಾಡುತ್ತಿದ್ದು, ಇನ್ನು ಮುಂದೆ ಎಣ್ಣೆ, ಬೇಳೆ, ಸಕ್ಕರೆ ಮತ್ತು ಇತರ ಆಹಾರ ಪದಾರ್ಥಗಳನ್ನು ನೀಡಲು ಸರ್ಕಾರ ಚಿಂತನೆ ನಡೆಸಿದೆ.
BPL ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಅಕ್ಕಿ ಬದಲು ಹಣವಲ್ಲ, ಇನ್ನು ಸಿಗಲಿದೆ ಎಣ್ಣೆ, ಬೇಳೆ, ಸಕ್ಕರೆ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರತಿ ಫಲಾನುಭವಿಗೆ ತಿಂಗಳಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿತ್ತು. ಆದರೇ ಕೇವಲ 5 ಕೆಜಿ ಅಕ್ಕಿಯನ್ನು ಮಾತ್ರ ನೀಡುತ್ತಿದ್ದು, ಉಳಿದ 5 ಕೆಜಿ ಬದಲಿಗೆ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡುತ್ತಿದೆ. ರಾಜ್ಯ ಸರಕಾರ ನಡೆಸಿದ ಸಮೀಕ್ಷೆಯಲ್ಲಿ ಶೇ 93ರಷ್ಟು ಫಲಾನುಭವಿಗಳು ಹೆಚ್ಚುವರಿಯಾಗಿ 5 ಕೆಜಿ ಅಕ್ಕಿಯ ಬದಲಿಗೆ 5 ಕೆಜಿ ಅಕ್ಕಿ ಜತೆಗೆ ಇತರೆ ಅಗತ್ಯ ವಸ್ತುಗಳನ್ನು ಪಡೆಯಲು ಆಸಕ್ತಿ ತೋರಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್ ಮುನಿಯಪ್ಪ ತಿಳಿಸಿದ್ದಾರೆ.
ಈ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸಚಿವರು ಹೇಳಿದ್ದಾರೆ. ನವದೆಹಲಿಯಲ್ಲಿ ಮಂಗಳವಾರ ಕೇಂದ್ರ ಆಹಾರ ಮತ್ತು ಪಡಿತರ ವಿತರಣಾ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿದ ಮುನಿಯಪ್ಪ, ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವಂತೆ ಮನವಿ ಸಲ್ಲಿಸಿದ್ದಾರೆ.