ಒಡಿಐ ರ್ಯಾಂಕಿಂಗ್ನಲ್ಲಿ ರೋಹಿತ್ ಶರ್ಮಾ ಅವರು ಕಿಂಗ್ ಕೊಹ್ಲಿಯನ್ನ ಹಿಂದಿಕ್ಕಿದ್ದಾರೆ. ಐಸಿಸಿ ಬಿಡುಗಡೆ ಮಾಡಿರುವ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ನಂ.2 ಸ್ಥಾನಕ್ಕೇರಿದ್ದಾರೆ.
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಮಾತ್ರ ಗಮನಾರ್ಹ ಪ್ರದರ್ಶನ ನೀಡಿದ ನಂತರ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಏರಿಕೆ ಕಂಡಿದ್ದಾರೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗೆ ಮುಂದಾಗಿದ್ದೇವೆ: DCM ಡಿ.ಕೆ ಶಿವಕುಮಾರ್
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ 157 ರನ್ ಗಳಿಸಿದ್ದರು. ಇದರಲ್ಲಿ ಎರಡು ಅರ್ಧಶತಕ ಸೇರಿದ್ದವು. ಅವರು ಸರಣಿಯಲ್ಲಿ 52 ಸರಾಸರಿಯಲ್ಲಿ ರನ್ಗಳಿಸಿ ಟಾಪ್ ಸ್ಕೋರರ್ ಆಗಿದ್ದರು. ಇದರೊಂದಿಗೆ ಏಕದಿನ ರ್ಯಾಂಕಿಂಗ್ನಲ್ಲಿ ರೋಹಿತ್ 2ನೇ ಸ್ಥಾನಕ್ಕೇರಿದ್ದಾರೆ.
ರೋಹಿತ್ ಶರ್ಮಾ 765 ರೇಟಿಂಗ್ ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಇದು ಅವರ ವೃತ್ತೀಜೀವನದ ಶ್ರೇಷ್ಠ ಸಾಧನೆ, ಭಾರತದ ಅಗ್ರ ಬ್ಯಾಟರ್ ಆಗಿದ್ದ ಶುಬ್ಮನ್ ಗಿಲ್ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ
ಗಿಲ್ 763 ರೇಟಿಂಗ್ ಗಳೊಂದಿಗೆ ಮೂರನೇ ಸ್ಥಾನ ಪಡೆದಿದ್ದರೆ, ವಿರಾಟ್ ಕೊಹ್ಲಿ 746 ರೇಟಿಂಗ್ ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿನ ವೈಫಲ್ಯ ಅವರಿಬ್ಬರ ಶ್ರೇಯಾಂಕದ ಮೇಲೆ ಪರಿಣಾಮ ಬೀರಿದೆ.
ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಏಕದಿನ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಬಾಬರ್ ಅಜಮ್ 824 ರೇಟಿಂಗ್ ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಸದ್ಯಕ್ಕೆ ಭಾರತದಲ್ಲಿ ಏಕದಿನ ಸರಣಿ ಇಲ್ಲದ ಕಾರಣ ರೋಹಿತ್ ಶರ್ಮಾ ಅಗ್ರಸ್ಥಾನಕ್ಕೆ ಬರುವ ಸಾಧ್ಯತೆಯಿಲ್ಲ
ಬೌಲಿಂಗ್ ವಿಭಾಗದಲ್ಲಿ ಸ್ಪಿನ್ನರ್ ಕುಲ್ದೀಪ್ ಯಾದವ್ ನಾಲ್ಕನೇ ಸ್ಥಾನದಲ್ಲಿದ್ದು ಭಾರತದ ಟಾಪ್ ಬೌಲರ್ ಆಗಿದ್ದಾರೆ. ಬುಮ್ರಾ 8ನೇ ಸ್ಥಾನದಲ್ಲಿದ್ದಾರೆ. ಮೊಹಮ್ಮದ್ ಸಿರಾಜ್ ಐದು ಸ್ಥಾನ ಕುಸಿದು 10ನೇ ಸ್ಥಾನದಲ್ಲಿದ್ದಾರೆ. ಟಾಪ್ 10ರಲ್ಲಿ ಭಾರತದ ಮೂವರು ಬೌಲರ್ಗಳಿರುವುದು ಹೆಮ್ಮೆಯ ವಿಷಯ.
ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ಮುಗಿದ ನಂತರ ಭಾರತಕ್ಕೆ ಆರು ವಾರಗಳ ವಿರಾಮ ಸಿಕ್ಕಿದೆ