ಬೆಂಗಳೂರು:- ರಾಜ್ಯದಲ್ಲಿರುವುದು ನಾಲಾಯಕ್ ದರಿದ್ರ ಸರ್ಕಾರ ಎಂದು ಆರ್ ಅಶೋಕ್ ಹೇಳಿದ್ದಾರೆ.
ನಗರದ ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡ್ನ ಸರ್ವಿಸ್ ರಸ್ತೆಯನ್ನು ದುರಸ್ತಿ ಮಾಡುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಉಲ್ಟಾ ಧ್ವಜ ಹಾರಿಸಿ ರಾಷ್ಟ್ರದ್ವಜಕ್ಕೆ ಅವಮಾನ: ಕ್ರಮಕ್ಕೆ ಮುಂದಾಗುತ್ತಾ ಪೊಲೀಸ್ ಇಲಾಖೆ!?
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡಿನ ಸರ್ವಿಸ್ ರಸ್ತೆಯ ವಿಡಿಯೊವನ್ನು ಸಾರ್ವಜನಿಕರು ನನಗೆ ಕಳಿಸಿದ್ದಾರೆ. ಬಿಬಿಎಂಪಿ ಆಯುಕ್ತರು ಅಥವಾ ಬಿಎಂಆರ್ಸಿಎಲ್ ಎಂಡಿ ಯಾರಾದರೂ ಆಗಲಿ, ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ತಿ ಮಾಡಿ, ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಿ ಎಂದು ಸಚಿವರು ಮನವಿ ಮಾಡಿದ್ದಾರೆ.
ರಸ್ತೆ ಗುಂಡಿ ಮುಚ್ಚುವಂತೆ ಸಾಮಾಜಿಕ ಜಾಲತಾಣದ ಮೂಲಕ ಅಧಿಕಾರಿಗಳಿಗೆ ಸಚಿವರು ಮನವಿ ಮಾಡಿರುವುದರಿಂದ ಇದು ಸರ್ಕಾರದ ಅಸಹಾಯಕತೆಯೋ? ಅಥವಾ ಸಚಿವರ ಅಸಹಾಯಕತೆಯೋ? ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.
ಅತ್ತ ಬ್ರ್ಯಾಂಡ್ ಬೆಂಗಳೂರು ಬಗ್ಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭಾಷಣ ಮಾಡುತ್ತಾರೆ. ಇತ್ತ ನೇರವಾಗಿ ಡಿ.ಕೆ.ಶಿವಕುಮಾರ್ಗೆ ಹೇಳಲಾಗದೆ, ಬಿಡಲಾಗದೇ ಸಚಿವರು ಒದ್ದಾಡುತ್ತಿದ್ದಾರೆ. ಮತ್ತೊಂದೆಡೆ ಸಾರ್ವಜನಿಕರ ಸಮಸ್ಯೆ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ಕಣ್ಣೆತ್ತಿ ನೋಡುತ್ತಿಲ್ಲ ಎಂದು ಸಾರ್ವಜನಿಕರು ಅರೋಪಿಸಿದ್ದಾರೆ.
ಕಂದಾಯ ಸಚಿವ ಕೃಷ್ಣ ಭೈರೇಗೌಡ ರಸ್ತೆ ಸರಿಪಡಿಸಿಲು ಅಧಿಕಾರಿಗಳಿಗೆ ಮನವಿ ಮಾಡಿರುವುದರ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದು, ಸಚಿವರೇ ಅಧಿಕಾರಿಗಳನ್ನು ಬೇಡಿಕೊಳ್ಳುತ್ತಿರುವುದನ್ನು ನೋಡಿದರೆ, ಇದು ಎಂತಹ ದರಿದ್ರ ನಾಲಾಯಕ್ ಸರ್ಕಾರ ಎಂಬುದು ಸ್ಪಷ್ಟವಾಗುತ್ತದೆ ಎಂದು ಕಿಡಿಕಾರಿದ್ದಾರೆ