ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ರತಿಭಟನೆ ಕಾವು ಜೋರಾಗಿದೆ. ಕೊಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿ ಮೇಲಿನ ಅತ್ಯಾಚಾರ ಖಂಡಿಸಿ ಮೈಸೂರಿನ ಕೆಆರ್ ಆಸ್ಪತ್ರೆ ಮುಂಭಾಗ ಕೈಗೆ ಕಪ್ಪು ಪಟ್ಟಿ ಧರಿಸಿ ವೈದ್ಯರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಕೆಆರ್ ಆಸ್ಪತ್ರೆ ಕಿರಿಯ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ. ದೇಶವನ್ನೇ ಬೆಚ್ಚಿ ಬೀಳಿಸಿರುವ ಕೊಲ್ಕತ್ತಾ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.
Varamahalakshmi Festival: ವರಮಹಾಲಕ್ಷ್ಮಿ ಹಬ್ಬದ ವೈಶಿಷ್ಟ್ಯವೇನು? ಆಚರಣೆ, ವ್ರತ ಹೇಗೆ? ಇಲ್ಲಿದೆ ಮಾಹಿತಿ
ಕಳೆದ ಶುಕ್ರವಾರ ಕೊಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್ನಲ್ಲಿ ಸ್ನಾತಕೋತ್ತರ ತರಬೇತಿ (ಪಿಜಿಟಿ) ವೈದ್ಯೆಯ ಶವ ಅರೆ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ರಾತ್ರಿ ಕರ್ತವ್ಯದಲ್ಲಿದ್ದ ಆ ವೈದ್ಯೆ ಸಹೋದ್ಯೋಗಿಗಳ ಜೊತೆ ಊಟ ಮುಗಿಸಿ, ವಿಶ್ರಾಂತಿಗೆಂದು ಸೆಮಿನಾರ್ ಹಾಲ್ಗೆ ಹೋಗಿದ್ದರು. ಏಕಾಂಗಿಯಾಗಿದ್ದ ಅವರ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ವರದಿಯ ಪ್ರಕಾರ, ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.