ಬೆಂಗಳೂರು:– ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಸನ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕೃಷ್ಣಾ ಜಲಾನಯನ ಪ್ರದೇಶದದಲ್ಲಿ ಆಗಸ್ಟ್ 21 ರವರೆಗೆ ಹಗುರದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ. ಇನ್ನು ಕಾವೇರಿ ಜಲಾನಯನ ಪ್ರದೇಶದಲ್ಲಿ ಆಗಸ್ಟ್ 19 ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ.
ಆ.24ರವರೆಗೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ ನಿರೀಕ್ಷೆಯಿದೆ. ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 20 ರವರೆಗೆ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ ನಿರೀಕ್ಷೆಯಿದೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 23 ರವರೆಗೆ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.