ಚಾಮರಾಜನಗರ:- ಸಿ.ಎಂ.ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಗಡಿ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸಚಿವರ “X” ಗೆ ಸ್ಪಂದನೆ: ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಆರಂಭ, ಸಂಚಾರ ಬಂದ್!
ಗಡಿ ಜಿಲ್ಲೆ ಚಾಮರಾಜನಗರ , ಗುಂಡ್ಲುಪೇಟೆ ಭಾಗದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಕುರುಬ ಸಮುದಾಯದ ಮುಖಂಡರು ಶನಿವಾರ ಪ್ರತಿಭಟನೆ ನಡೆಸಿದರು.
40 ವರ್ಷದ ರಾಜಕೀಯ ಜೀವನದಲ್ಲಿ ಒಂದೂ ಕಪ್ಪು ಚುಕ್ಕೆ ಇಲ್ಲದ ಸಿ.ಎಂ.ಸಿದ್ದರಾಮಯ್ಯ ವಿರುದ್ದ ಪಿತೂರಿ ನಡೆಸಲಾಗಿದ್ದು ಯಾವುದೇ ತಪ್ಪು ಮಾಡದವ ವಿರುದ್ದ ಜೆಡಿಎಸ್ ಹಾಗೂ ಬಿಜೆಪಿ ಏಜೆಂಟರಾಗಿರುವ ರಾಜ್ಯಪಾಲರು ಪ್ರಾಸಿಕ್ಯೂಸನ್ ಗರ ಅನುಮತಿ ನೀಡಿದ್ದಾರೆ. ಇದೊಂದು ವ್ಯವಸ್ಥಿತ ಸಂಚಾಗಿದ್ದು ಕೇಂದ್ರ ಸರ್ಕಾರದ ಚಿತಾವಣೆಯಿಂದ ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸುವ ಹುನ್ನಾರವಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು.
ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರೆ ಕುರುಬ ಸಮಾಜದ ಸಿದ್ದರಾಮಯ್ಯ ಅಭಿಮಾನಿಗಳು ರಸ್ತೆಯಲ್ಲಿ ರಾಜ್ಯಪಾಲರ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.