ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಅನುಮತಿ ವಿಚಾರವಾಗಿ ಪ್ರತಿಭಟನೆ ಕಾವು ಜೋರಾಗಿದೆ.
ಆನೇಕಲ್ನಲ್ಲಿ ಝಿಕಾ ಭೀತಿ: ಆರು ಮಂದಿಗೆ ಸೋಂಕು ಪತ್ತೆ, 3 ಕಿ.ಮೀ ರೇಡಿಯಸ್ ಕಂಟೋನ್ಮೆಂಟ್ ಜೋನ್!
ಬೆಂಗಳೂರಿನಲ್ಲಿ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ. ಮುಖ್ಯಂಮತ್ರಿ ಸಿದ್ದರಾಮಯ್ಯ ಮುಡಾ ಹಗರಣ ಸಂಬಂಧ ರಾಜೀನಾಮೆ ನೀಡಬೇಕು ಅನ್ನೋ ವಿರೋಧ ಪಕ್ಷಗಳ ಒತ್ತಾಯದ ಬೆನ್ನಲ್ಲೆ ಈಗ ಪ್ರತಿಭಟನೆಗಳೂ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ನಗರದಾದ್ಯಂತ ಸಾಕಷ್ಟು ಕಡೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಆಯಾ ವಿಭಾಗದ ಡಿಸಿಪಿಗಳಿಗೆ ನಗರ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.
ನಗರದಾದ್ಯಂತ ಪ್ರತಿಭಟನೆ ನಡೆಸಿದರೆ ಸಹಜವಾಗಿಯೇ ಲಾ ಅಂಡ್ ಆರ್ಡರ್ ಹದಗೆಡುವ ಸಾಧ್ಯತೆ ತೀರ ಹೆಚ್ಚಿದೆ. ಹೀಗಾಗಿ ಪ್ರತಿಭಟನೆಯನ್ನ ಹತ್ತಿಕ್ಕಲು ಪೊಲೀಸರೂ ಕೂಡ ಮುಂದಾಗಿದ್ದಾರೆ. ಸಭೆ ನಡೆಸಿದ ಪೊಲೀಸ್ ಆಯುಕ್ತರು ಆಯಾ ವಿಭಾಗದ ಡಿಸಿಪಿಗಳಿಗೆ ಸೂಚನೆ ನೀಡಿ ಯಾವ ಭಾಗದಲ್ಲಿ ಹೆಚ್ಚು ಪ್ರತಿಭಟನೆ ಸಾಧ್ಯತೆ ಇದೆಯೋ ಅಲ್ಲಿ ಹೆಚ್ಚುವರಿ ಪೊಲೀಸರನ್ನ ನಿಯೋಜನೆ ಮಾಡಲು ಸೂಚನೆ ನೀಡಿದ್ದಾರೆ.
ಈಗಾಗಲೆ ಕಾಂಗ್ರೆಸ್ ಮುಖಂಡರು, ಬ್ಲಾಕ್ ವೈಸ್ ಮುಖಂಡರ ಜೊತೆ ಆಯಾ ವಿಭಾಗದ ಡಿಸಿಪಿಗಳು ಚರ್ಚೆಯನ್ನ ನಡೆಸಿದ್ದಾರೆ. ಈಗಾಗಲೇ ಹೈಕೋರ್ಟ್ ಆದೇಶದ ಹಿನ್ನಲೆ ಎಲ್ಲೆಂದರಲ್ಲಿ ಪ್ರತಿಭಟನೆ ಮಾಡುವಂತಿಲ್ಲ. ನಿಗದಿತ ಸ್ಥಳದಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶವಿದೆ ಎಂದು ಅವರಿಗೆ ತಿಳಿ ಹೇಳಲಾಗಿದೆ. ಅಷ್ಟೇ ಅಲ್ಲದೆ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆಗೆ ಅವಕಾಶವಿದ್ದು ಅಲ್ಲಿ ಪ್ರತಿಭಟನೆ ಮಾಡಬಹುದು ಎಂದು ಸೂಚನೆ ನೀಡಿದ್ದಾರೆ.
ಇನ್ನು ಆಡಳಿತ ಪಕ್ಷದಲ್ಲಿರುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಬೆಂಬಲಿಗರು ಪ್ರತಿಭಟನೆ ಮಾಡುತ್ತಿರುವುದರಿಂದ ಪೊಲೀಸರೂ ಕೂಡ ಎಲ್ಲೆಂದರಲ್ಲಿ ಪ್ರತಿಭಟನೆಯನ್ನ ಹತ್ತಿಕ್ಕಲು ಹರಸಾಹಸ ಪಡಬೇಕಾಗಿದೆ. ಆದರೆ ಕೋರ್ಟ್ ಆದೇಶ ಮೀರಿದವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲೇಬೇಕಾಗಿದೆ.
ಇನ್ನು ಈಗಾಗಲೆ ಕಾಂಗ್ರೆಸ್ ಪ್ರಾಬಲ್ಯವಿರುವ ನಗರದ ಏರಿಯಾಗಳಲ್ಲಿ ಕೆಎಸ್ಆರ್ಪಿ ತುಕಡಿಗಳನ್ನ ನಿಯೋಜನೆ ಮಾಡುವ ಮೂಲಕ ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ಮುಂದಾಗಿದ್ದಾರೆ.