ಬೆಂಗಳೂರು:– ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ಕಾವು ಜೋರಾಗಿದ್ದು, ಅತ್ತ ರಾಜ್ಯಪಾಲರ ವಿರುದ್ಧ “ಕೈ ನಾಯಕರು ಪ್ರೊಟೆಸ್ಟ್ ನಡೆಸುತ್ತಿದ್ದರೆ, ಇತ್ತ ಸಿಎಂ ರಾಜೀನಾಮೆಗೆ ಆಗ್ರಹಿಸಿ “ಮೈತ್ರಿ” ಪ್ರತಿಭಟನೆ ಮಾಡುತ್ತಿದ್ದಾರೆ.
WI vs SA: ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ವಿಂಡೀಸ್ ಆಲ್ರೌಂಡರ್ ಔಟ್!
ಬಿಜೆಪಿ-ಜೆಡಿಎಸ್ ನಾಯಕರಿಗೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಬ್ರಹ್ಮಾಸ್ತ್ರವಾಗಿ ಸಿಕ್ಕಿದೆ. ಹೀಗಾಗಿ ಇದೇ ಬ್ರಹ್ಮಾಸ್ತ್ರವನ್ನ ಬಳಸಿಕೊಂಡು ಹೋರಾಟಕ್ಕಿಳಿದಿರೋ ದೋಸ್ತಿಗಳು ಇವತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ್ರು.
ಬೆಂಗಳೂರಿನ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದ್ರು. ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ನ ನಾಯಕರು ಪ್ರತಿಭಟನೆ ನಡೆಸಿ ಸಿಎಂ ವಿರುದ್ಧ ಆಕ್ರೋಶ ಹೊರಹಾಕಿದ್ರು.
ಪ್ರತಿಭಟನೆ ವೇಳೆ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಈ ಹಿಂದೆ ನೀಡಿದ್ದ ಹೇಳಿಕೆಯೊಂದರ ವಿಡಿಯೋ ಪ್ರದರ್ಶನ ಮಾಡಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಂದಿನ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ಅವಧಿಯಲ್ಲಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿದ್ದ ವಿಡಿಯೋ ಪ್ರದರ್ಶಿಸಿದ್ದಾರೆ. ವಿಡಿಯೋ ಪ್ಲೇ ಮಾಡಿ, ಸಿದ್ದರಾಮಯ್ಯ ಹೇಳಿಕೆ ನೀಡಿದ್ದ ಆಡಿಯೋವನ್ನ ಪ್ರತಿಭಟನೆಯಲ್ಲೇ ಪ್ರಸಾರ ಮಾಡಿದ್ದಾರೆ.
ಯಡಿಯೂರಪ್ಪರಂತೆ ತಲೆ ಭಾಗಿ ಸಿದ್ದರಾಮಯ್ಯ ರಾಜೀನಾಮೆ ಕೊಡ್ಬೇಕು ಅಂತಾ ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ರು. ಸಿಎಂ ಸಿದ್ದರಾಮಯ್ಯನವರೇ ನೀವು ಕಳ್ಳತನ ಮಾಡಿದ್ದೀರಿ, ಲೂಟಿ ಹೊಡೆದಿದ್ದೀರಿ ಅಂತ ನಾವು ಹೇಳಿದ್ದೇವೆ. ಹೀಗಾಗಿ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಹಾಕಬೇಕು ಅಂತ ಒತ್ತಾಯಿಸಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಟಾಂಗ್ ಕೊಟ್ಟಿದ್ದಾರೆ. ವಿರೋಧಪಕ್ಷದ ನಾಯಕ ಆರ್.ಅಶೋಕ್ ಮತ್ತೊಮ್ಮೆ ತಮ್ಮ ಅಜ್ಞಾನವನ್ನು ಪ್ರದರ್ಶಿಸಿದ್ದಾರೆ ಅಂತಾ ವಾಗ್ದಾಳಿ ನಡೆಸಿದ್ದಾರೆ.