ಬೆಂಗಳೂರು:- ನನ್ನ ಕುಗ್ಗಿಸಬೇಕೆನ್ನುವ ನಿಮ್ಮ ಪ್ರಯತ್ನ ಸಫಲವಾಗಲ್ಲ, ಹೋರಾಟ ಅಂದ್ರೆ ನಾನು ಫುಲ್ ಆ್ಯಕ್ಟಿವ್ ಎಂದು ಮೈತ್ರಿಗೆ ಸಿದ್ದು ಟಾಂಗ್ ಕೊಟ್ಟಿದ್ದಾರೆ.
Tungabhadra Dam: TB ಡ್ಯಾಂ ಕ್ರಸ್ಟ್ ಗೇಟ್ ಅಳವಡಿಕೆ ಸಕ್ಸಸ್: ಸೋರಿಕೆಯಾಗುತ್ತಿದ್ದ ನೀರಿಗೆ ಬ್ರೇಕ್
ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದು ಹಾಗೂ ರಾಜೀನಾಮೆಗೆ ಬಿಜೆಪಿ ಆಗ್ರಹದ ಕುರಿತು ಅವರು ಮಾಧ್ಯಮಗಳ ಮುಂದೆ ಮಾತನಾಡಿದರು. ನಾನು ಡಲ್ ಆಗಿಲ್ಲ. ಬಹಳ ಆಕ್ಟೀವ್ ಆಗಿಯೇ ಇದ್ದೇನೆ. ನಾನು ಬಡವರ ಪರ ಇದ್ದೇನೆ, ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇನೆ ಎಂಬ ಕಾರಣಕ್ಕಾಗಿ ಸಿದ್ದರಾಮಯ್ಯನನ್ನು ಮುಗಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು
ನಾನು, ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ನಿನ್ನೆಗೆ ನಾನು ಮಂತ್ರಿಯಾಗಿಯೇ ನಲುವತ್ತು ವರ್ಷಗಳಾದವು. ಯಾವತ್ತೂ ತಪ್ಪು ಮಾಡಿಲ್ಲ, ಮಾಡೋದೂ ಇಲ್ಲ. ನನ್ನಲ್ಲಿ ಒಂದು ಕಪ್ಪು ಚುಕ್ಕಿಯೂ ಇಲ್ಲ. ನನ್ನ ಜೀವನದಲ್ಲಿ ಮಸಿ ಬಳಿಯಬೇಕು ಅಂತ ಇದನ್ನೆಲ್ಲ ಮಾಡುತ್ತಿದ್ದಾರೆ. ಬಿಜೆಪಿ ರಾಜಕೀಯ ದುರುದ್ದೇಶದಿಂದ ಪ್ರತಿಭಟನೆ ಮಾಡುತ್ತಿದೆ ಎಂದು ಅವರು ಆಪಾದಿಸಿದರು.