ಬೆಂಗಳೂರು:- ನಿರುದ್ಯೋಗಿಗಳೇ ಗಮನಿಸಿ, ನಮ್ಮ ಮೆಟ್ರೊದಲ್ಲಿ ಹಲವು ಉದ್ಯೋಗಗಳು ಖಾಲಿ ಇದ್ದು, ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಬಹುದಾಗಿದೆ.
ಗುತ್ತಿಗೆ ಆಧಾರದ ಮೇಲೆ ಶೀಘ್ರವೇ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳು ಮತ್ತು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಯ ಹೆಸರು: ಸಹಾಯಕ ಭದ್ರತಾ ಅಧಿಕಾರಿ, ಒಟ್ಟು ಹುದ್ದೆಗಳು – 58. ಸಂಬಳ: 32,000 ರೂಪಾಯಿ. ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL)
ಕೆಲಸದ ಸ್ಥಳ: ಬೆಂಗಳೂರು
ಹುದ್ದೆಯ ಹೆಸರು: ಸಹಾಯಕ ಭದ್ರತಾ ಅಧಿಕಾರಿ
ಸಂಬಳ: 32,000 ರೂ, ಒಟ್ಟು ಹುದ್ದೆಗಳು 58
ವಯೋಮಿತಿ: 65 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿ ಇರುವವರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.
ಆಯ್ಕೆ ವಿಧಾನ: ದೈಹಿಕ ಪರೀಕ್ಷೆ, ಅರ್ಹತೆ, ಅನುಭವ ಮತ್ತು ಸಂದರ್ಶನದ ಆಧಾರದ ಮೇಲೆ
ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ:
ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು – ೫೬೦೦೨೭
ಅರ್ಜಿ ಪ್ರಕ್ರಿಯೆ ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09- 09 -2024