ಹುಬ್ಬಳ್ಳಿ ಆ.22: ಆಗಸ್ಟ್ 26ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಇರುವುದರಿಂದ ಪಾಲಿಕೆಯ ಹುಬ್ಬಳ್ಳಿ ಮತ್ತು ಧಾರವಾಡ ವಧಾಲಯಗಳು ಹಾಗೂ ಎಲ್ಲ ಮಾಂಸದ ಅಂಗಡಿಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ.
ಮಾಂಸದ ಅಂಗಡಿಗಳನ್ನು ತೆರೆದಿದ್ದಲ್ಲಿ ಪಾಲಿಕೆಯಿಂದ ಅವರ ಲೈಸೆನ್ಸ್ ರದ್ದು ಪಡಿಸಿ, ಸರ್ಕಾರದ ನಿಯಮಗಳನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪಾಲಿಕೆಯ ಮುಖ್ಯ ಪಶು ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.