ಹುಬ್ಬಳ್ಳಿ: ಅಕ್ರಮ ಬಡ್ಡಿ ವ್ಯವಹಾರದಲ್ಲಿ ತೊಡಗಿರುವ ಪುಡಾರಿಗಳನ್ನ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಪೊಲೀಸರು ಹೆಡೆಮುರಿಕಟ್ಟಿದ್ದು ಮೀಟರ್ ಬಡ್ಡಿ ವ್ಯವಹಾರದಲ್ಲಿ ತೊಡಗಿದ್ದ 25 ದಂಧೆಕೋರರನ್ನು ಬಂಧನ ಮಾಡಲಾಗಿದೆ.ಈ ಕುರಿತು ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಶಶಿಕುಮಾರ್, ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಹುಬ್ಬಳ್ಳಿ, ಧಾರವಾಡ ಸೇರಿದಂತೆ ನಾಲ್ಕು ಠಾಣೆಗಳ ವ್ಯಾಪ್ತಿಯಲ್ಲಿ 7 ಪ್ರಕರಣ ದಾಖಲಿಸಿ 25 ಜನರನ್ನು ಬಂಧಸಲಾಗಿದೆ.
ಧಾರವಾಡದ ಉಪನಗರ ಠಾಣೆ-2, ಶಹರ ಠಾಣೆ-2, ಪ್ರಕರಣ ವಿದ್ಯಾನಗರ ಠಾಣೆ-2 ಹಾಗೂ ಹುಬ್ಬಳ್ಳಿ ಬೆಂಡಿಗೇರಿ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿವೆ. ಬಂಧಿತರಿಂದ 10 ದ್ವಿಚಕ್ರ ವಾಹನಗಳು, 10 ಮೊಬೈಲ್, ಹರಿತವಾದ ಆಯುಧ, ಮೀಟರ್ ಬಡ್ಡಿ ದಂಧೆಯ ವಿವರ ನಮೋದಿಸಿದ ದಾಖಲೆಗಳು, ಬಾಂಡ್ ಗಳನ್ನು ಜಪ್ತು ಮಾಡಲಾಗಿದೆ. ಸಾರ್ವಜನಿಕರು ಯಾವುದಾದರೂ ಮೀಟರ್ ಬಡ್ಡಿ ದಂಧೆಗೆ ಸಿಲುಕಿದ್ದರೆ ಸೂಕ್ತ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಠಾಣೆಯಲ್ಲಿ ಪ್ರಕರಣ ದಾಖಲಿಸಬಹುದು ಎಂದು ತಿಳಿಸಿದರು