ಬೆಂಗಳೂರು:- ಬೆಂಗಳೂರಿಗರಿಗೆ ಬಿಗ್ ಶಾಕ್ ಎದುರಾಗಿದ್ದು, ನೀರಿನ ದರ ಏರಿಕೆ ಫಿಕ್ಸ್ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ವೈರಲ್ ಇನ್ಫೆಕ್ಷನ್ ಆತಂಕ: ಆಸ್ಪತ್ರೆಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಳ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ 12-13 ವರ್ಷಗಳಿಂದ ನೀರಿನ ದರ ಹೆಚ್ಚಳ ಮಾಡಿಲ್ಲ. ಆದರೂ ಬಿಡಬ್ಲ್ಯೂ ಎಸ್ಎಸ್ಬಿ ಕಷ್ಟಪಟ್ಟು ನಿರ್ವಹಣೆ ಮಾಡುತ್ತಿದೆ. ಯಾರೇ ಆಕ್ಷೇಪ ವ್ಯಕ್ತಪಡಿಸಿದರೂ ನೀರಿನ ದರ ಏರಿಕೆ ಅನಿವಾರ್ಯ. ಅದನ್ನು ಮಾಡುತ್ತೇವೆ ಎಂದರು.
ರಾಜಧಾನಿಯ 1.40 ಕೋಟಿ ಜನಸಂಖ್ಯೆಗೆ ನೀರನ್ನು ಒದಗಿಸಲೇ ಬೇಕು. ಇದಕ್ಕಾಗಿ ಸಾಲ ಮಾಡಿ, ಸಂಪರ್ಕ ಜಾಲವನ್ನು ಹೆಚ್ಚಿಸದ ಹೊರತು ನೀರು ಕೊಡಲು ಕಷ್ಟವಾಗುತ್ತದೆ. ದರ ಹೆಚ್ಚಳ ಮಾಡದಿದ್ದರೇ ನೀರು ಸರಬರಾಜು ಕಂಪನಿ ಉಳಿಯುವುದಿಲ್ಲ, ನೌಕರರು ಬದುಕಲು ಆಗುವುದಿಲ್ಲ. ಸಂಸ್ಥೆಗೆ ವಿದ್ಯುತ್ ಬಿಲ್ ಕಟ್ಟಲು ಆಗುತ್ತಿಲ್ಲ. ಎಲ್ಲರಿಗೂ ನೀರಿನ ದರ ಹೆಚ್ಚಳ ಮಾಡುವುದಿಲ್ಲ. ಎಷ್ಟು ಏರಿಕೆ ಮಾಡಬೇಕು ಎಂದು ಇನ್ನೂ ನಿರ್ಧರಿಸಿಲ್ಲ. ಚರ್ಚೆ ಮಾಡಲಿ. ಧರಣಿ ಮಾಡಲಿ ನಾನು ಇದಕ್ಕೆ ಬದ್ಧವಾಗಿದ್ದೇನೆ ಎಂದು ಹೇಳಿದರು.
ಬಿಡಬ್ಲ್ಯೂ ಎಸ್ಎಸ್ಬಿ ನನ್ನ ಬಳಿಯೇ ಇರುವ ಕಾರಣ ಅನೇಕರು ನೂತನ ಯೋಜನೆ ಕುರಿತು ಚರ್ಚೆ ನಡೆಸಲು ಬಂದರು. ಈ ಹಿಂದೆ ಇಂಧನ ಇಲಾಖೆಯಲ್ಲಿ ಇದ್ದಾಗಲು ಇದೇ ಪ್ರಸ್ತಾವನೆ ಬಂದಿತ್ತು. ಮುಂಬೈ ಸೇರಿದಂತೆ ಇತರೆಡೆ ಅದಾನಿ ಹಾಗೂ ಇತರೆ ಕಂಪೆನಿಗಳು ವಿದ್ಯುತ್ ಸರಬರಾಜು ಮಾಡುತ್ತಿವೆ. ನಾನು ಇರುವ ತನಕ ಇದೆಲ್ಲವೂ ಸಾಧ್ಯವಿಲ್ಲ. ಈ ವಿಚಾರ ಇಲ್ಲಿಗೆ ಬಿಟ್ಟುಬಿಡಿ, ಇದರ ಸುದ್ದಿಗೆ ಬರಬೇಡಿ ಎಂದು ವಾಪಸ್ ಕಳುಹಿಸಿದೆ ಎಂದರು.