ಬೆಂಗಳೂರು: ಸಿಎಂ ವಿರುದ್ದ ರಾಜ್ಯಪಾಲರ ಪ್ರಾಸಿಕ್ಯೂಷನ್ ಅವಕಾಶ ಹಿನ್ನಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಇಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಬೆಳಗ್ಗೆ11 ಗಂಟೆಗೆ ಒಟ್ಟಿಗೆ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ತೆರಳಲಿರುವ ಸಿಎಂ, ಡಿಸಿಎಂ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಲಿದ್ದಾರೆ.
ರಾಜ್ಯಪಾಲರ ವಿರುದ್ಧ ಸಮರ ಸಾರಿರೋ ಸಿದ್ದರಾಮಯ್ಯಗೆ ತಮ್ಮ ಪಕ್ಷದ ಎಲ್ಲಾ ಶಾಸಕರ ಸಾಥ್ ಸಿಕ್ಕಿದೆ. ನಿನ್ನೆ ಸಚಿವ ಸಂಪುಟ ಸಭೆಯ ಬಳಿಕ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಚಲ್ಲಿ ಒಗ್ಗಟ್ಟಿನ ಹೋರಾಟದ ತೀರ್ಮಾನವಾಗಿದೆ.
ವಾರದಲ್ಲಿ ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಿದರೆ ಉತ್ತಮ.? ವೈದ್ಯರು ಹೇಳೋದು ಏನು ಗೊತ್ತಾ..?
ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬಳಿಕ ಆಗಿರುವ ಬೆಳವಣಿಗೆ, ಕೋರ್ಟ್ನಲ್ಲಿ ರಿಲೀಫ್ ಸಿಕ್ಕಿರುವ ಕುರಿತು ಸಿದ್ದರಾಮಯ್ಯನವರು ಮಾಹಿತಿ ನೀಡಲಿದ್ದಾರೆ. ಇದೇ ವೇಳೆ ಶಾಸಕಾಂಗ ಸಭೆಯಲ್ಲಿ ರಾಜ್ಯಪಾಲರ ವಿರುದ್ಧ ಕೈಗೊಂಡಿರುವ ನಿರ್ಣಯವನ್ನೂ ಗಮನಕ್ಕೆ ತರಲಿದ್ದಾರೆ ಎಂದು ಹೇಳಲಾಗುತ್ತಿದೆ.