ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಆಸ್ಪತ್ರೆಯಲ್ಲಿ 65 ವರ್ಷದ ವೃದ್ದೆ ರೋಗಿಯ ಮೇಲೆ 24 ವರ್ಷದ ಯುವಕ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಇರ್ಫಾನ್ (24) ಎಂಬಾತ ವೃದ್ಧೆಯನ್ನೂ ಬಿಡದ ಕಾಮುಕ. ಇರ್ಫಾನ್ ಚಿಂತಾಮಣಿ ನಗರದ ಹೈದರಾಲಿ ನಗರದ ನಿವಾಸಿಯಾಗಿದ್ದು,
ಎಚ್ಚರ.. ತಲೆಕೂದಲಿಗೆ ಮೆಹಂದಿ ಹಚ್ಚಿದ್ರೆ ಈ ಸಮಸ್ಯೆ ನಿಮ್ಮನ್ನ ಕಾಡಬಹುದು!
ಚಿಕಿತ್ಸೆಗೆಂದು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದ ವೃದ್ಧೆಯ ಮೇಲೆ ಕೃತ್ಯ ಎಸಗಿದ್ದಾನೆ. ಆಕ್ಸಿಜನ್ ಪ್ಲಾಂಟ್ ಪಕ್ಕದ ಶೆಡ್ನಲ್ಲಿ ಮಲಗಿದ್ದ ಮಹಿಳೆಯ ಮೇಲೆ ಈತ ಅತ್ಯಾಚಾರ ಎಸಗಿದ್ದು, ಈತನನ್ನು ಬಂಧಿಸಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಮುರುಳೀಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.