ಬೆಂಗಳೂರು: ಮೂಡಾ ಭ್ರಷ್ಟಚಾರ ಆರೋಪದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ವಿರುದ್ಧ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಗೆ ದೂರು ನೀಡಲಾಗಿದೆ. ದೆಹಲಿಯಲ್ಲಿ ಅಹಿಂದಾ ಚಳುವಳಿ ಸಂಘಟನೆಯ ರಾಜ್ಯ ಮುಖ್ಯ ಜಂಟಿ ಸಂಚಾಲಕ ಎನ್.ವೆಂಕಟೇಶಗೌಡ (Venkatesh Gowda), ಯುವ ಘಟಕದ ರಾಜ್ಯಧ್ಯಕ್ಷ ಬಿ.ಟಿ.ಮಂಜುನಾಥ್ರಿಂದ ದೂರು ನೀಡಲಾಗಿದೆ.
ಖಾಸಗಿ ದೂರಿನ ಮೇರೆಗೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದು ಸರಿಯಲ್ಲ. ಬಿಜೆಪಿ-ಜೆಡಿಎಸ್ ಒತ್ತಡಕ್ಕೆ ಮಣಿದು ಅನುಮತಿ ನೀಡಿದೆ. ರಾಜ್ಯಪಾಲರ ಕಚೇರಿ ರಾಜಕೀಯವಾಗಿ ದುರ್ಬಳಕೆಯಾಗುತ್ತಿದ್ದು, ಕೂಡಲೇ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ದೂರಿನ ಪ್ರತಿಯಲ್ಲಿ ಉಲ್ಲೇಖಿಸಿದೆ.
ದೂರಿನ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅಹಿಂದಾ ಚಳುವಳಿ ಸಂಘಟನೆಯ ರಾಜ್ಯ ಮುಖ್ಯ ಜಂಟಿ ಸಂಚಾಲಕ ಎನ್.ವೆಂಕಟೇಶಗೌಡ, ಸಿಎಂ ಸಿದ್ದರಾಮಯ್ಯ ದೇಶದಲ್ಲಿ ಮಾದರಿ ಆಡಳಿತ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಓಬಿಸಿ ಜನರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ತಮ್ಮ ಎರಡನೇ ಅವಧಿಯಲ್ಲಿ ಸಾಕಷ್ಟು ಜನಪ್ರಿಯ ಯೋಜನೆಗಳನ್ನು ಜಾರಿ ಮಾಡಿದ್ದಾರೆ.