ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ತೆರೆಮರೆಯಲ್ಲೇ ಸೂರ್ಯಕುಮಾರ್ ಯಾದವ್ ಅವರಿಗೆ ಬಿಗ್ ಆಫರ್ ನೀಡಿದೆ.
ಸೂರ್ಯಕುಮಾರ್ ಯಾದವ್ ಅವರೊಂದಿಗೆ ಕೆಕೆಆರ್ ಫ್ರಾಂಚೈಸಿ ಮಾತುಕತೆ ನಡೆಸಿದ್ದು, ಈ ವೇಳೆ ಬೃಹತ್ ಮೊತ್ತದ ಆಫರ್ ನೀಡಲಾಗಿದೆ. ಅಷ್ಟೇ ಅಲ್ಲದೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಆಗಮಿಸಿದರೆ ನಾಯಕತ್ವವನ್ನು ಸಹ ನೀಡುವುದಾಗಿ ತಿಳಿಸಿದೆ. ಈ ಮೂಲಕ ಸೂರ್ಯಕುಮಾರ್ ಯಾದವ್ ಅವರ ಖರೀದಿಗೆ ಕೆಕೆಆರ್ ಪ್ಲ್ಯಾನ್ ರೂಪಿಸುತ್ತಿದೆ.
Sunita Williams: ಮುಂದಿನ ವರ್ಷ ಭೂಮಿಗೆ ಮರಳಲಿದ್ದಾರಂತೆ ಸುನೀತಾ ವಿಲಿಯಮ್ಸ್!
ಪ್ರಸ್ತುತ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿರುವ ಸೂರ್ಯಕುಮಾರ್ ಯಾದವ್ ಪಡೆಯುತ್ತಿರುವುದು ಕೇವಲ 8 ಕೋಟಿ ರೂ. ಮಾತ್ರ. ಆದರೆ ಕೆಕೆಆರ್ ತಂಡಕ್ಕೆ ಬಂದರೆ ನಾಯಕನಾಗಿ ಆಯ್ಕೆ ಮಾಡುವುದರೊಂದಿಗೆ ಬೃಹತ್ ಮೊತ್ತವನ್ನು ನೀಡುವುದಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ತಿಳಿಸಿದೆ ಎಂದು ವರದಿಯಾಗಿದೆ
ಹೀಗಾಗಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ರೋಹಿತ್ ಶರ್ಮಾ ಬಳಿಕ ಸೂರ್ಯ ಮುಂಬೈ ಇಂಡಿಯನ್ಸ್ ತಂಡದ ಚುಕ್ಕಾಣಿ ಹಿಡಿಯುವ ವಿಶ್ವಾಸದಲ್ಲಿದ್ದರು.
ಆದರೆ ಅನಿರೀಕ್ಷಿತ ಎಂಬಂತೆ ಗುಜರಾತ್ ಟೈಟಾನ್ಸ್ ತಂಡದಿಂದ ಹಾರ್ದಿಕ್ ಪಾಂಡ್ಯರನ್ನು ಕರೆತರುವ ಮೂಲಕ ಮುಂಬೈ ಇಂಡಿಯನ್ಸ್ ನಾಯಕತ್ವ ನೀಡಿತ್ತು. ಇದೀಗ ಸೂರ್ಯಕುಮಾರ್ ಯಾದವ್ ಮುಂದೆ ಕೂಡ ಇದೇ ಮಾದರಿಯ ಆಫರ್ ಇದೆ. ಮುಂಬೈ ಇಂಡಿಯನ್ಸ್ ತೊರೆದು ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ, ನಾವು ಖರೀದಿಸುತ್ತೇವೆ, ಅಲ್ಲದೆ ಕ್ಯಾಪ್ಟನ್ ಪಟ್ಟವನ್ನು ನೀಡುತ್ತೇವೆ ಎಂದು ಕೆಕೆಆರ್ ತಿಳಿಸಿದೆ.
ಅಂದಹಾಗೆ ಸೂರ್ಯಕುಮಾರ್ ಯಾದವ್ 2014 ರಿಂದ 2017ರವರೆಗೆ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಆಡಿದ್ದರು. ಹೀಗಾಗಿ ಕೆಕೆಆರ್ ಫ್ರಾಂಚೈಸಿ ಸೂರ್ಯನ ಪಾಲಿಗೆ ಹೊಸದೇನಲ್ಲ. ಅದರಲ್ಲೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಲೀಕ ಶಾರುಖ್ ಖಾನ್ ಸೂರ್ಯಕುಮಾರ್ ಯಾದವ್ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.