ಉಡುಪಿ:- ಕಾರ್ಕಳ ಯುವತಿ ರೇಪ್ & ಮರ್ಡರ್ ಕೇಸ್ ಗೆ ಸಂಬಧಪಟ್ಟಂತೆ ಸಂತ್ರಸ್ತೆ ರಕ್ತದಲ್ಲಿ ಡ್ರಗ್ಸ್ ಪತ್ತೆ ಆಗಿದ್ದು, ಆರೋಪಿಗಳ ರಿಪೋರ್ಟ್ ನೆಗೆಟಿವ್ ಆಗಿದೆ.
ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಎಸ್.ಪಿ. ಡಾ. ಅರುಣ್ ಕೆ. ಅವರು, ಪ್ರಕರಣದ 1ನೇ ಆರೋಪಿ ಅಲ್ತಾಫ್ ಹಾಗೂ ಬಿಯರ್ ಬಾಟಲ್ ತಂದುಕೊಟ್ಟ 2ನೇ ಆರೋಪಿ ರಿಚರ್ಡ್ ಬ್ಲಡ್ ಟೆಸ್ಟ್ ರಿಪೋರ್ಟ್ ನೆಗೆಟಿವ್ ಬಂದಿದೆ. ಆರೋಪಿ ಅಲ್ತಾಫ್ ವಿಚಾರಣೆ ವೇಳೆ ಕಾರಿನಲ್ಲಿದ್ದ ಒಂದು ಪುಡಿಯನ್ನು ತೋರಿಸಿದ್ದ. ಇದನ್ನೇ ಸಂತ್ರಸ್ತ ಯುವತಿ ತೆಗೆದುಕೊಂಡಿದ್ದಾಗಿ ಹೇಳಿಕೆ ನೀಡಿದ್ದಾನೆ. ಸದ್ಯ ಆ ಪೌಡರ್ ಅನ್ನು ನಾವು ಎಫ್ಎಸ್ಎಲ್ಗೆ ಕಳಿಸಲಾಗಿದ್ದು, ಯಾವ ಡ್ರಗ್ಸ್ ಎಂದು ಪರಿಶೀಲನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಪ್ರಕರಣದ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ಪ್ರಕರಣ ದಾಖಲಾಗಿದೆ. ಈ ಡ್ರಗ್ ಅನ್ನು ಎಲ್ಲಿಂದ ಪಡೆದಿದ್ದಾರೆ ಮತ್ತು ಎಲ್ಲಿಂದ ಬಂದಿದೆ ಎನ್ನುವ ಕುರಿತು ಅಪರಾಧ ಕ್ರಮಾಂಕ : 146/24 ಕಲಂ. 8(c), 22(b) NDPS Act, Sec. 3(5) BNS ನಲ್ಲಿ ಪ್ರಕರಣ ದಾಖಲಾಗಿದೆ. ಡ್ರಗ್ ಎಲ್ಲಿಂದ ಬಂದಿದೆ ಎಂಬುದರ ಬಗ್ಗೆ ಪೂರ್ಣ ತನಿಖೆ ಮಾಡಲಾಗುವುದು. ಸಂತ್ರಸ್ತೆಯು ಜಡ್ಜ್ ಮುಂದೆ ಹೇಳಿಕೆ ಕೊಡಲಿದ್ದು, ವೈದ್ಯಕೀಯ ಪರೀಕ್ಷೆ ಆದ ನಂತರ ಈ ಪ್ರಕ್ರಿಯೆ ನಡೆಯಲಿದೆ. ಆದಷ್ಟು ಬೇಗನೆ ಅತ್ಯಾಚಾರ ಪ್ರಕರಣದ ತನಿಖೆಯನ್ನು ಮುಕ್ತಾಯಗೊಳಿಸಲಾಗುವುದು ಎಂದು ಉಡುಪಿ ಎಸ್ಪಿ ಡಾ.ಅರುಣ್ ಕೆ. ತಿಳಿಸಿದ್ದಾರೆ.