ಬೆಳಗಾವಿ: ಉಗ್ರ ಸಂಘಟನೆ ಜೊತೆಗೆ ನಂಟು ಹೊಂದಿದ್ದ ಕೈದಿ ಬೆಳಗಾವಿಯ ಹಿಂಡಲಗಾ ಜೈಲಿಗೆ ಏರ್ ಲಿಫ್ಟ್ ಮಾಡಲಾಗಿದೆ. ಮಹಾರಾಷ್ಟ್ರದ ನಾಗ್ಪುರ ಜೈಲಿನಿಂದ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸೋಮವಾರ ರಾತ್ರಿ ಶಿಫ್ಟ್ ಮಾಡಲಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಕರೆ ಮಾಡಿ 100 ಕೋಟಿ ರೂ. ಬೇಡಿಕೆಯಿಟ್ಟಿದ್ದ ಆಸಾಮಿ ಈತ. 2023ರ ಜನವರಿ 14 ರಂದು ಬೆಳಗಾವಿಯ ಹಿಂಡಲಗಾ ಜೈಲಿನಿಂದ ನಾಗ್ಪುರದಲ್ಲಿರುವ ಸಚಿವ ಗಡ್ಕರಿ ಕಚೇರಿಗೆ ಫೋನ್ ಮಾಡಿ ಇಬ್ಬರು ಕೈದಿಗಳು ಹಣಕ್ಕೆ ಬೇಡಿಕೆ ಇಟ್ಟಿದ್ದರು.
Parkinson Disease: ಕೈಕಾಲುಗಳು ನಡುಗುತ್ತಾ? ಹಾಗಿದ್ರೆ ಇದು ಪಾರ್ಕಿನ್ಸನ್ ಕಾಯಿಲೆ ಆಗಿರಬಹುದು!
ಇಬ್ಬರನ್ನೂ ವಶಕ್ಕೆ ಪಡೆದುಕೊಂಡು ಮಹಾರಾಷ್ಟ್ರದ ನಾಗ್ಪುರ ಠಾಣೆ ಪೊಲೀಸರು ಕರೆದೊಯ್ದಿದ್ದರು. ಇಷ್ಟು ದಿನ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿದ್ದ ಅಫ್ಸರ್ ಪಾಷಾನನ್ನು ಮತ್ತೆ ಈಗ ಬೆಳಗಾವಿಗೆ ಶಿಫ್ಟ್ ಮಾಡಲಾಗಿದೆ. ನಿನ್ನೆ ರಾತ್ರಿ ನಾಗ್ಪುರದಿಂದ ಅಫ್ಸರ್ ಪಾಷಾನನ್ನು ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಕರೆ ತಂದ ಪೊಲೀಸರು, ಬಿಗಿ ಪೊಲೀಸ್ ಭದ್ರತೆಯಲ್ಲಿ ರಸ್ತೆ ಮಾರ್ಗವಾಗಿ ಹಿಂಡಲಗಾ ಜೈಲಿಗೆ ರವಾನಿಸಿದ್ದಾರೆ.