ಮಂಡ್ಯ :- ರಕ್ತ ಯಾವುದೋ ಅಂಗಡಿ – ಮುಂಗಟ್ಟುಗಳಲ್ಲಿ ಸಿಗುವ ವಸ್ತುವಲ್ಲ. ಮನುಷ್ಯರ ದೇಹದಲ್ಲಿ ಉತ್ಪತ್ತಿಯಾಗುವ ಸಂಪನ್ಮೂಲವಾಗಿದ್ದು, ಹೀಗಾಗಿ ಅವಶ್ಯಕತೆ ಇರುವವರಿಗೆ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬೇಕೆಂದು ಶಾಹಿ ಎಕ್ಸ್ಪೋರ್ಟ್ ಪ್ರೈ ಲಿ ಜನರಲ್ ಮ್ಯಾನೇಜರ್ ರಮೇಶ್ ಬಂಡಿ ಮನವಿ ಮಾಡಿದರು.
ಕುಮಾರಸ್ವಾಮಿಗೆ ಉರುಳಾಗುತ್ತಾ ಗಣಿ ಹಗರಣ: ತನಿಖೆಗೆ ಆಗ್ರಹಿಸಿ ಬೀದಿಗಿಳಿಯಲು ಕಾಂಗ್ರೆಸ್ ಸಜ್ಜು!
ಮದ್ದೂರು ರೋಟರಿ ಸಂಸ್ಥೆ ಹಾಗೂ ಶಾಹಿ ಎಕ್ಸ್ಪೋರ್ಟ್ ಪ್ರೈ ಲಿ ಸಹಯೋಗದೊಂದಿಗೆ ಕಾರ್ಖಾನೆ ಆವರಣದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲಾ ದಾನಗಳಿಗಿಂತ ಒಬ್ಬ ವ್ಯಕ್ತಿಯ ಜೀವ ಉಳಿಸುವ ರಕ್ತದಾನ ಶ್ರೇಷ್ಠದಾನವಾಗಿದೆ. ಇತ್ತಿಚಿನ ದಿನಗಳಲ್ಲಿ ರಕ್ತದಾನ ಶಿಬಿರದಲ್ಲಿ ರಾಜ್ಯದಲ್ಲಿಯೇ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಇಂದಿನ ದಿನಗಳಲ್ಲಿ ರಕ್ತದ ಅವಶ್ಯಕತೆ ಹೆಚ್ಚಿದ್ದು, ಶಸ್ತ್ರ ಚಿಕಿತ್ಸೆ, ಮಹಿಳೆಯರಿಗೆ ಹಾಗೂ ಕಡಿಮೆ ರಕ್ತ ಇರುವ ರೋಗಿಗಳಿಗೆ ರಕ್ತದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಹೆಚ್ಚೆಚ್ಚು ರಕ್ತದಾನ ಶಿಬಿರಗಳು ನಡೆಯಬೇಕು ಎಂದು ಹೇಳಿದರು.
ಕಾಲಕಾಲಕ್ಕೆ ರಕ್ತದಾನ ಮಾಡುವುದರಿಂದ ದಾನಿಗಳ ಆರೋಗ್ಯವು ಕೂಡ ವೃದ್ಧಿಸುವ ಜೊತೆಗೆ ಅನೇಕ ರೋಗಿಗಳಿಗೆ ನೆರವಾಗಲಿದ್ದು, ಮುಂದಿನ ದಿನಗಳಲ್ಲಿ ಶಾಹಿ ಎಕ್ಸ್ಪೋರ್ಟ್ ಪ್ರೈ ಲಿ ವತಿಯಿಂದ ಹೆಚ್ಚಿನ ಪ್ರಮಾಣದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗುವುದು ಭರವಸೆ ನೀಡಿದರು.
ರಕ್ತದಾನ ಶಿಬಿರದಲ್ಲಿ ಶಾಹಿ ಎಕ್ಸ್ಪೋರ್ಟ್ ಪ್ರೈ ಲಿ ಸಿಬ್ಬಂದಿಗಳು 112 ಯುನಿಟ್ ರಕ್ತದಾನ ಮಾಡುವುದರ ಮೂಲಕ ಶಿಬಿರವನ್ನು ಯಶಸ್ವಿಗೊಳಿಸಿದರು.
ಇದೇ ವೇಳೆ ರೋಟರಿ ಸಂಸ್ಥೆಯ ಅಧ್ಯಕ್ಷ ಚನ್ನಂಕೇಗೌಡ, ಮಾಜಿ ಅಧ್ಯಕ್ಷ ಶಶಿಗೌಡ, ಕಾರ್ಯದರ್ಶಿ ಲೋಕೇಶ್ ಪದಾಧಿಕಾರಿಗಳಾದ ಪ್ರವೀಣ್, ಮಂಜುನಾಥ್ ನಾಯ್ಡು, ಶಿವಕುಮಾರ್, ಅರುಣ್ ಕುಮಾರ್, ರಾಮಚಂದ್ರ, ರವಿ ಹಾಗೂ ಶಾಹಿ ಎಕ್ಸ್ಪೋರ್ಟ್ ಪ್ರೈ ಲಿ ಸಂಪನ್ಮೂಲ ವಿಭಾಗದ ಅಧಿಕಾರಿಗಳಾದ ಶಿವಪ್ರಸಾದ್, ವಿಶ್ವನಾಥ್, ಚೇತನ್, ಲತೇಶ್, ಮತ್ತಿತರರು.
ವರದಿ : ಗಿರೀಶ್ ರಾಜ್ ಮಂಡ್ಯ