ಬೆಂಗಳೂರು:- ಕರ್ನಾಟಕದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಕೇರ್ ಸೆಂಟರ್ ಆರಂಭಿಸಲಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಪ್ರಕರಣ: ಅಮೆರಿಕದಲ್ಲಿ ಭಾರತೀಯ ಮೂಲದ ವೈದ್ಯರಿಂದ ಪ್ರತಿಭಟನೆ
ಕ್ಯಾನ್ಸರ್ ರೋಗಿಗಳು ಕಿಮೋಥೆರಪಿಗಾಗಿ ಇಂದು ದೂರದ ನಗರಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಬರುವ ಪರಿಸ್ಥಿತಿಯಿದೆ. ಜನರಿಗೆ ಅವರ ಜಿಲ್ಲೆಯಲ್ಲಿಯೇ ಕಿಮೋಥೆರಪಿ ಸೇವೆ ಒದಗಿಸುವ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇ ಕೇರ್ ಸೆಂಟರ್ಗಳನ್ನು ತೆರೆಯಲಾಗುವುದು. ಒಂದು ತಿಂಗಳ ಒಳಗಾಗಿ ಈ ಸೇವೆ ಲಭ್ಯವಾಗಲಿದೆ ಎಂದು ಸಚಿವರು ಆಶ್ವಾಸನೆ ನೀಡಿದರು.
ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಎಂ.ಸಿ.ಎಚ್ ಆಸ್ಪತ್ರೆ, ಭೋದಕ ಕೊಠಡಿ, ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 150 ಕೋಟಿ ರೂ. ಯ ಅನುದಾನವನ್ನು ಕೇಳಿದ್ದೆವು. ಸಿಎಂ ಸಿದ್ದರಾಮಯ್ಯ ಅವರು ನಮ್ಮ ಮನವಿಗೆ ಸ್ಪಂದಿಸಿ, ಅತಿ ಕಡಿಮೆ ಅವಧಿಯಲ್ಲೇ ಅನುದಾನ ಮಂಜೂರು ಮಾಡಿಕೊಟ್ಟಿದ್ದಾರೆ. ಭೂಮಿ ಪೂಜೆಯನ್ನು ನೆರವೇರಿಸಿದ್ದಾರೆ. ಇದರ ಸಂಪೂರ್ಣ ಸದುಪಯೋಗ ನಮ್ಮ ಜನಸಾಮಾನ್ಯರಿಗೆ ದೊರೆಯಲಿದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಡಯಾಲಿಸಿಸ್ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, 750ಕ್ಕೂ ಹೆಚ್ಚು ಏಕಬಳಕೆಯ ಡಯಾಲಿಸಿಸ್ ಹೊಸ ಯಂತ್ರಗಳನ್ನು ಅಳವಡಿಸಿದ್ದೇವೆ. ಸರ್ಕಾರಿ ಆಸ್ಪತ್ರೆಗಳಿಗೆ ಈ ಹಿಂದೆ ಶೇ.30 ರಷ್ಟು ಮಾತ್ರ ಔಷಧಿ ನಿಗಮದಿಂದ ಔಷಧಿಗಳು ಸರಬರಾಜು ಆಗುತ್ತಿದ್ದವು. ಇದೀಗ ಶೇ.70 ರಷ್ಟು ಔಷಧಿಗಳನ್ನು ನಿಗಮದಿಂದ ಖರೀದಿಸಿ ಸರ್ಕಾರಿ ಆಸ್ಪತ್ರೆಗಳಿಗೆ ಪೂರೈಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಶೇ.90 ರಷ್ಟು ಔಷಧಿಗಳು ದೊರಕಿಸುವತ್ತ ಆರೋಗ್ಯ ಇಲಾಖೆ ಹೆಜ್ಜೆಯಿಟ್ಟಿದೆ ಎಂದು ಭರವಸೆ ನೀಡಿದರು.