ಬೆಂಗಳೂರು:- ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿರುವ ಹವಮಾನ ಇಲಾಖೆಯು 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
Gold Price: ಚಿನ್ನದ ಬೆಲೆ ಅಲ್ಪ ಇಳಿಕೆ; ಗ್ರಾಂ ಗೆ 7303 ರೂ- ಇಲ್ಲಿದೆ ಪಟ್ಟಿ!
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದ
ಇನ್ನೂ ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಸೇರಿದಂತೆ ಬಾಗಲಕೋಟೆ, ಬೀದರ್, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ.
ಭಾರಿ ಮಳೆ ಹಿನ್ನೆಲೆಯಲ್ಲಿ ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಬೆಳಗಾವಿ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಹೀಗಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.