ದಾವಣಗೆರೆ:- ಕಲುಷಿತ ನೀರು ಕುಡಿದು 7 ಮಂದಿ ಅಸ್ವಸ್ಥ ಹಿನ್ನೆಲೆ, ಹುಣಸಘಟ್ಟ PDO ರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ ಸುರೇಶ್ ಬಿ ಇಟ್ನಾಳ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ಕಳೆದ ನಾಲ್ಕೈದು ದಿನಗಳ ಹಿಂದೆ ಕಲುಷಿತ ನೀರು ಕುಡಿದು 7 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಓರ್ವ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಹಿನ್ನೆಲೆ ಕರ್ತವ್ಯ ನಿರ್ಲಕ್ಷ್ಯ ಆರೋಪದ ಮೇಲೆ ಪಿಡಿಒ ಪರಮೇಶ್ ಅವರನ್ನು ಅಮಾನತು ಮಾಡಲಾಗಿದೆ.
ಕುಡಿಯುವ ನೀರಿನ ಪೈಪ್ನಲ್ಲಿ ಚರಂಡಿ ನೀರು ಸೇರಿಕೊಳ್ಳುತ್ತಿದ್ದರೂ ಪಿಡಿಒ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಆರೋಪಿಸಲಾಗಿದೆ.