ಬೆಂಗಳೂರು:- ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿ ಹೆಂಡತಿಗೆ ಚಿತ್ರಹಿಂಸೆ ಕೊಟ್ಟು ಪಾಪಿ ಪತಿ ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ಜರುಗಿದೆ.
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭೀಕರ ಕೊಲೆ: ಮಚ್ಚಿನಿಂದ ಕೊಚ್ಚಿ ವ್ಯಕ್ತಿ ಹತ್ಯೆ!
ನವ್ಯಾ ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಈಕೆಯ ಪತಿ ಕಿರಣ್ ಕೊಲೆಗೈದ ಆರೋಪಿಯಾಗಿದ್ದಾನೆ.
ಕಿರಣ್ ಮತ್ತು ನವ್ಯಾ ಕಳೆದ ಮೂರು ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆ ಮಾಡಿಕೊಂಡಿದ್ದರು. ಇನ್ನು ನವ್ಯಾ ಸಿನಿಮಾರಂಗದಲ್ಲಿ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಳು. ಪತ್ನಿಯ ಶೀಲ ಶಂಕಿಸಿ, ಆಕೆಯನ್ನು ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ನೀಡಿ, ಹತ್ಯೆ ಮಾಡಿದ್ದಾನೆ.
ಕೆಂಗೇರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು ಎಂದು ತಿಳಿದು ಬಂದಿದೆ.