ಚಿಕ್ಕಬಳ್ಳಾಪುರ:- ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದಂಡುಪಾಳ್ಯ ಗೇಟ್ ಬಳಿ ಟಿಟಿ ವಾಹನ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ ಘಟನೆ ಜರುಗಿದೆ.
Karnataka Rain: ಇಂದು ಕರಾವಳಿಗೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ, ಬೆಂಗಳೂರಿನ ವಾತವರಣ ಹೇಗೆ!?
ಪರಿಣಾಮ ಜಿಲ್ಲೆಯ ಚಿಂತಾಮಣಿ ತಾಲೂಕಿನ ದಂಡುಪಾಳ್ಯ ಗೇಟ್ ಬಳಿ ನಡೆದಿದೆ. ಕಾರಿನಲ್ಲಿದ್ದ ಮಗ ಶ್ರೀಕಾಂತ್ ಈತನ ತಂದೆ ಶ್ರೀನಿವಾಸಲು ಹಾಗೂ ತಾಯಿ ಪುಷ್ಪ ಮೂವರು ಸಹ ದಾರುಣ ಸಾವನ್ನಪ್ಪಿದ್ದಾರೆ. ಇನ್ನೂ ಟಿಟಿ ವಾಹನದಲ್ಲಿದ್ದ 12 ಜನರಿಗೆ ಗಂಭೀರ ಗಾಯಗಳಾಗಿ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಟಿಟಿ ವಾಹನ ಆಂಧಪ್ರದೇಶದ ಬಾಯಿಕೊಂಡದಿಂದ ಚಿಂತಾಮಣಿ ಕಡೆಗೆ ಬರುತ್ತಿತ್ತು. ಅಪಘಾತಕ್ಕೀಡಾದ ಕಾರು ಬೆಂಗಳೂರಿನಿಂದ ಕಡಪ ಹೈವೇ ರಸ್ತೆ ಮುಖಾಂತರ ಆಂಧ್ರಪ್ರದೇಶದ ಕಡೆಗೆ ಹೋಗುತ್ತಿತ್ತು. ಎರಡು ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡಿವೆ. ಕಾರಿನಲ್ಲಿದ್ದವರು ಮೂಲತಃ ಆಂಧ್ರದವರಾದರೂ ಬೆಂಗಳೂರಿನಲ್ಲಿ ನೆಲಸಿದ್ದರು. ಬುಧವಾರ ಸಂಬಂಧಿಕರ ಮದುವೆಗೆ ಅಂತ ಆಂಧ್ರದ ಕಡೆಗೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ.
ಇನ್ನೂ ಟಿಟಿ ವಾಹನದಲ್ಲಿದ್ದವರು ಸಹ ಬೆಂಗಳೂರಿನವರಾಗಿದ್ದು, ಬಾಯಿಕೊಂಡ ಗಂಗಮ್ಮ ದೇವಾಲಯಕ್ಕೆ ಹೋಗಿ ಬೆಂಗಳೂರಿಗೆ ವಾಪಾಸ್ ಆಗುತ್ತಿದ್ದರು ಅಂತ ತಿಳಿದುಬಂದಿದೆ