ಬೆಂಗಳೂರು:- ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಗೋವಿಂದಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆದಾಯಕ್ಕೂ ಮೀರಿ ಆಸ್ತಿ ಗಳಿಕೆ: ನಾನು ಸಾಯೋವರೆಗೂ ಈ ರೀತಿ ಕೇಸ್ ಎದುರಿಸಬೇಕು ಎಂದ ಡಿಕೆಶಿ!
ಬೆಳಗ್ಗೆ 6.57ರ ಸುಮಾರಿಗೆ ಬಂದಿರುವ ಇಮೇಲ್ ನಲ್ಲಿ ಶಾಲೆ ಆವರಣದಲ್ಲಿ ಐದು ಪೈಪ್ ಲೈನ್ ಬಾಂಬ್ ಗಳನ್ನು ಇಡಲಾಗಿದೆ ಎಂದು ದುಷ್ಕರ್ಮಿಗಳು ಹೇಳಿದ್ದಾರೆ.
Father Kodachi ಹೆಸರಿನ [email protected] [email protected] ಎಂಬ ಐಡಿಯಿಂದ ಇಮೇಲ್ ಬೆದರಿಕೆ ಬಂದಿದ್ದು, ಮಧ್ಯಾಹ್ನ 1.30ಕ್ಕೆ ಬ್ಲಾಸ್ಟ್ ಆಗ ಆಗಲಿದೆ ಎಂದು ಮೇಲ್ ನಲ್ಲಿ ತಿಳಿಸಲಾಗಿದೆ.
ಮಾಹಿತಿ ಬಂದ ಕೂಡಲೇ ಶಾಲೆಗೆ ಹೋಗಿ ಗೋವಿಂದಪುರ ಪೊಲೀಸರು, ಬಾಂಬ್ ಸ್ಕ್ವಾಡ್ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಯಾವುದೇ ಆತಂಕಕಾರಿ ವಿಚಾರ ಪತ್ತೆಯಾಗಿಲ್ಲ.
ಸದ್ಯ ಘಟನೆ ಸಂಬಂಧ ಶಾಲೆಯ ಆಡಳಿತಾಧಿಕಾರಿ ನೀಡಿರುವ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.