ಬೆಂಗಳೂರು:- ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ರಾಜ್ಯಪಾಲರ ಹುದ್ದೆ ಸಾಂವಿಧಾನ ನೀಡಿರುವ ಪೀಠ. ರಾಜ್ಯಪಾಲರ ಕಚೇರಿ ಒಂದು ರಾಜಕೀಯ ಪಕ್ಷದ ಕಚೇರಿ ಆಗಬಾರದು. ಸಂವಿಧಾನಿಕವಾಗಿ ಈ ಹುದ್ದೆಗೆ ಇರುವ ಘನತೆದೆ ಧಕ್ಕೆ ಬರುವಂತೆ ನಡೆದುಕೊಳ್ಳಬಾರದು ಎಂಬುದು ನಮ್ಮ ಅಭಿಲಾಷೆ” ಎಂದರು.
ಲೋಕಾಯುಕ್ತ ಎಸ್ ಐಟಿ ಅವರು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರಮಂತ್ರಿ ಕುಮಾರಸ್ವಾಮಿ ಹಾಗೂ ಮೂರು ಜನ ಮಾಜಿ ಮಂತ್ರಿಗಳ ಅಕ್ರಮಗಳ ವಿರುದ್ಧ ನ್ಯಾಯಾಲಯದ ಸೂಚನೆಯಂತೆ ಸಂಪೂರ್ಣ ತನಿಖೆ ನಡೆಸಿ ವರದಿ ನೀಡಿದ್ದಾರೆ. ಆದರೂ ಏನೂ ಕ್ರಮ ತೆಗೆದುಕೊಂಡಿಲ್ಲ. ನಮ್ಮ ಮುಖ್ಯಮಂತ್ರಿಗಳ ಮೇಲೆ ಕ್ರಮ ಕೈಗೊಳ್ಳಲು ಮುಂದಾಗುವ ರಾಜ್ಯಪಾಲರು, ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ. ನೀವು ತಾರತಮ್ಯ ಎಸಗಿ ನಮ್ಮ ವಿರುದ್ಧ ಕೆಲಸ ಮಾಡಿದ್ದಾರಲ್ಲವೇ” ಎಂದು ಹೇಳಿದರು.
ಆಟೋ ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಮಹಿಳೆಯರು ಸಾವು, ನಾಲ್ವರಿಗೆ ಗಾಯ!
ನಾಲ್ಕು ಜನರ ವಿರುದ್ಧ ಭ್ರಷ್ಟಾಚಾರ ವಿರೋಧಿ ಕಾಯ್ದೆ, 197 ಸಿಪಿಸಿ ಕಾಯ್ದೆಯಡಿ ಸೆಕ್ಷನ್ 17 ಎ ಪ್ರಕಾರ ಲೋಕಾಯುಕ್ತವು ಅನುಮತಿ ಕೇಳಿತ್ತು. ಆದರೂ ರಾಜ್ಯಪಾಲರು ಕ್ರಮ ತೆಗೆದುಕೊಳ್ಳಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಯಾರೋ ಅರ್ಜಿ ಕೊಟ್ಟರು ಎಂದು ಒಂದೇ ದಿನದಲ್ಲಿ ತೀರ್ಮಾನ ತೆಗೆದುಕೊಂಡರು. ಆದರೆ ಮಾಜಿ ಮುಖ್ಯಮಂತ್ರಿಗಳ, ಮಂತ್ರಿಗಳ ವಿಚಾರದಲ್ಲಿ ಲೋಕಾಯುಕ್ತ ಈ ಹಿಂದೆ ಮನವಿ ಮಾಡಿದಾಗ ಎಂಟತ್ತು ದಿನಗಳಲ್ಲಿ ತನಿಖೆಗೆ ಅನುಮತಿ ನೀಡುವ ತೀರ್ಮಾನ ಮಾಡಬಹುದಿತ್ತು. ಆದರೂ ಪಕ್ಷಪಾತ ಮಾಡಿದ್ದಾರೆ. ಮುಖ್ಯಮಂತ್ರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳ ಬೇಡಿ ಎಂದು ಸಚಿವ ಸಂಪುಟ ಮನವಿ ಮಾಡಿದ್ದರು. ರಾಜ್ಯಪಾಲರು ಮಾನ್ಯ ಮಾಡಲಿಲ್ಲ” ಎಂದು ಹೇಳಿದರು.
ಮುಖ್ಯಮಂತ್ರಿಗಳ ವಿರುದ್ಧ ಯಾವುದೇ ಪೂರಕ ದಾಖಲೆಗಳಿಲ್ಲ. ಕುಮಾರಸ್ವಾಮಿ ಅವರು ಸೇರಿದಂತೆ ಮೂರು ಜನ ಮಂತ್ರಿಗಳ ವಿರುದ್ಧ ದಾಖಲೆ ಇದ್ದರೂ ರಾಜ್ಯಪಾಲರು ಪಕ್ಷಪಾತ ಏಕೆ ಮಾಡಿದರು. ರಾಜ್ಯಪಾಲರ ಕಚೇರಿ ಸಮಾನತೆ ಹೆಸರಾಗಿರಬೇಕು. ಸಾಂವಿಧಾನಿಕ ಪೀಠಕ್ಕೆ ಇರುವ ಗೌರವ ಉಳಿಯಬೇಕು. ಎಂದು ನಾವು ರಾಜಭವನ ಚಲೋ ಮಾಡಿದ್ದೇವೆ. ನ್ಯಾಯದ ಪರವಾಗಿ ಧ್ವನಿ ಎತ್ತಲು ನಾವು ಮುಂದಾಗಿದ್ದೇವೆ.” ಎಂದು ಹೇಳಿದರು.