ಬೆಂಗಳೂರು: ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳಿಗೆ ಗೌರಿ ಹಬ್ಬದಂದು ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆಯನ್ನು ಎದುರುನೋಡುತ್ತಿವೆ.
ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಇದಕ್ಕೆ ಸಹಕಾರ ನೀಡಿವೆ. ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಈಗಾಗಲೇ ಯೋಜನೆಯ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಮಾಡಿದ್ದೇನೆ ಎಂದು ವಿವರಿಸಿದರು.
ಗರ್ಭನಿರೋಧಕ ಮಾತ್ರೆ ಸೇವನೆಯಿಂದ ಪಿರಿಯಡ್ಸ್ ಮೇಲೆ ಪರಿಣಾಮ ಬೀರುತ್ತದೆಯೇ.? ಇಲ್ಲಿದೆ ಉತ್ತರ
ಈ ಯೋಜನೆ ಮೂಲಕ ನೀರನ್ನು ಕಾಲುವೆಗಳಿಗೆ ಹರಿಸುತ್ತಿದ್ದೇವೆ. ಈ ಯೋಜನೆ ಮಾರ್ಗದ ಮಧ್ಯೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗಗಳಲ್ಲಿ ಸ್ವಲ್ಪ ಸಮಸ್ಯೆ ಇದ್ದು, ಅವುಗಳನ್ನು ಬಗೆಹರಿಸಿದ್ದೇವೆ. ಜಾಗ ಹಸ್ತಾಂತರವಾದ ಬಳಿಕ ಪ್ರಮುಖ ಕಾಲುವೆಗಳಿಗೆ ನೀರು ಹರಿಯಲಿವೆ. ಈಗ ತಾತ್ಕಾಲಿಕವಾಗಿ ವಾಣಿ ವಿಲಾಸ ಅಣೆಕಟ್ಟೆಗೆ ನೀರು ಹರಿಸಲಾಗುತ್ತಿದೆ. ಯೋಜನೆಯ 7 ವಿಯರ್ಗಳು ನೀರನ್ನು ಎತ್ತುತ್ತಿವೆ ಎಂದು ಮಾಹಿತಿ ನೀಡಿದರು.