ಬಿಗ್ ಬಾಸ್ ಕನ್ನಡ 11’ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಭಾನುವಾರ ‘ಬಿಗ್ ಬಾಸ್ ಕನ್ನಡ 11’ ಕಾರ್ಯಕ್ರಮದ ಮೊಟ್ಟ ಮೊದಲ ಪ್ರೋಮೋ ಬಿಡುಗಡೆಯಾಗಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರೋಮೋ ಪ್ರಸಾರವಾಗುತ್ತಿದೆ. ಕಲರ್ಸ್ ಕನ್ನಡ ವಾಹಿನಿಯ ಸೋಷಿಯಲ್ ಮೀಡಿಯಾ ಅಕೌಂಟ್ಗಳಲ್ಲಿ ‘ಬಿಗ್ ಬಾಸ್ ಕನ್ನಡ 11’ ಪ್ರೋಮೋ ವೀಕ್ಷಣೆಗೆ ಲಭ್ಯವಿದೆ.
51ನೇ ವಸಂತಕ್ಕೆ ಕಾಲಿಟ್ಟ ಕಿಚ್ಚ ಸುದೀಪ್: ಮಧ್ಯರಾತ್ರಿ ಕೇಕ್ ಕಟ್ ಮಾಡಿ ಸಂಭ್ರಮ!
ಇನ್ನೂ ಮೊದಲ ಸೀಸನ್ನಿಂದ ಹಿಡಿದು ಹತ್ತು ಸೀಸನ್ಗಳು ಯಶಸ್ವಿಯಾಗಿ ಪ್ರಸಾರ ಕಂಡಿದೆ. ಪ್ರತಿ ಸೀಸನ್ನಲ್ಲಿ ಭಿನ್ನ ವಿಭಿನ್ನವಾಗಿರೋ ಲೋಗೋಗಳು ಅನಾವರಣ ಆಗುತ್ತಲೇ ಇರುತ್ತೆ. ಆದರೆ ಈ ಬಾರಿಯ ಬಿಗ್ಬಾಸ್ ಲೋಗೋದಲ್ಲಿ ಒಂದು ಕಡೆ ಬೆಂಕಿ, ಮತ್ತೊಂದು ಕಡೆ ನೀರು ಇದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಅಂದರೆ ಬಿಗ್ಬಾಸ್ ಮನೆಯೊಳಗೆ ಸ್ಪರ್ಧಿಗಳ ಆಕ್ರೋಶ, ಜಗಳ, ಕಿತ್ತಾಟ, ಕಣ್ಣೀರು, ಭಾವನಾತ್ಮಕ ನಂಟಿನ ಸಾರವನ್ನು ಹೇಳ್ತಿದೆ.
ಈ ಬಾರಿಯ ಬಿಗ್ಬಾಸ್ಗೆ ಯಾರೆಲ್ಲಾ ಸ್ಪರ್ಧಿಗಳು ಬರಲಿದ್ದಾರೆ ಎಂದು ವೀಕ್ಷಕರು ಕಾಯುತ್ತಿದ್ದಾರೆ. ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಕೆಲವು ಸ್ಟಾರ್ ನಟ, ನಟಿಯರು, ಸೋಷಿಯಲ್ ಮೀಡಿಯಾ ಸ್ಟಾರ್ಗಳ ಪಟ್ಟಿಗಳಲ್ಲಿ ಕೆಲವೊಂದು ಹೆಸರುಗಳು ಹರಿದಾಡುತ್ತಿವೆ. ಅವುಗಳು ಎಷ್ಟರ ಮಟ್ಟಿಗೆ ಸತ್ಯ ಎಂದು ಇನ್ನೂ ಕೆಲವೇ ಕೆಲವು ದಿನಗಳಲ್ಲಿ ಉತ್ತರ ಸಿಗಲಿದೆ.
ಬಿಗ್ ಬಾಸ್ ಕನ್ನಡ ಸೀಸನ್ 10’ ಯಶಸ್ಸು ಕಂಡಿತ್ತು. ನಿರೂಪಕ ಸುದೀಪ್ ಅವರ ಸಿನಿಮಾ ಕೆಲಸಗಳಿಗೆ ಈ ಶೋ ಅಡಚಣೆ ಉಂಟುಮಾಡಿತ್ತು. ಎಲ್ಲೇ ಇದ್ದರೂ ಬಿಗ್ ಬಾಸ್ಗಾಗಿ ಅವರು ಬೆಂಗಳೂರಿಗೆ ಬರಬೇಕಿತ್ತು. ಈಗ ಅವರು 2-3 ಸಿನಿಮಾಗಳನ್ನು ಒಟ್ಟೊಟ್ಟಿಗೆ ಶೂಟ್ ಮಾಡುವ ಆಲೋಚನೆಯಲ್ಲಿ ಇದ್ದಾರೆ.
ಹೀಗಾಗಿ, ಅವರು ಬಿಗ್ ಬಾಸ್ನಿಂದ ಹೊರಕ್ಕೆ ನಡೆಯಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ರೀತಿ ಆಗಿಲ್ಲ. ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ ನಡೆಸಿಕೊಡಲಿದ್ದಾರೆ.