ಹುಬ್ಬಳ್ಳಿ:– ರೈತರಿಗೆ ನೀಡುವ ಹಾಲಿನ ದರದಲ್ಲಿ 1.5ರೂ. ಕಡಿತ ಹಿನ್ನೆಲೆ, ಸಿದ್ದರಾಮಯ್ಯ ವಿರುದ್ದ ಪ್ರಹ್ಲಾದ್ ಜೋಶಿ ವಾಗ್ದಾಳಿ ಮಾಡಿದ್ದಾರೆ.
Muda Scam: ಹಗರಣ ಆರೋಪ ಒಪ್ಪಿಕೊಂಡ ರಾಜ್ಯ ಸರ್ಕಾರ, CM ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ!
ಕೇಂದ್ರ ಸರ್ಕಾರ ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲೆಂದು ಶ್ರಮಿಸುತ್ತಿದೆ. ಸಿದ್ದರಾಮಯ್ಯ ಸರ್ಕಾರ ರೈತರಿಗೆ ನೀಡುವ ಹಾಲಿನ ದರ ಕಡಿತ ಮಾಡಿದೆ. ನಮ್ಮದು ರೈತರ ಸರ್ಕಾರ, ಜನಪರ ಸರ್ಕಾರ ಎಂದು ಹೇಳಿಕೊಳ್ಳುತ್ತಿರುವ ‘ಕೈ’ಸರ್ಕಾರಕ್ಕೆ ನಾಚಿಕೆಯಾಗಬೇಕೆಂದು ಆಕ್ರೋಶ ಹೊರಹಾಕಿದರು.
ಈಗಾಗಲೇ ಅತಿವೃಷ್ಟಿ, ಅನಾವೃಷ್ಟಿಯಿಂದ ರಾಜ್ಯದ ರೈತರು ಬೆಳೆ ಹಾನಿಯಾಗಿ ತೀವ್ರ ಸಂಕಷ್ಟದಲ್ಲಿದ್ದಾರೆ. ಇದೀಗ ಹಾಲಿನ ದರ ಕಡಿತದಿಂದ ಸರ್ಕಾರ ರೈತರಿಗೆ ಗಾಯದ ಮೇಲೆ ಬರೆ ಎಳೆಯುತ್ತಿದೆ. ಇತ್ತ ಕೇಂದ್ರ ಸರ್ಕಾರ ರೈತರ ನೆರವಿಗೆ ಧಾವಿಸಿ ಹೆಸರು, ಉದ್ದು, ಸೂರ್ಯಕಾಂತಿಗೆ ಬೆಂಬಲ ಬೆಲೆ ಹೆಚ್ಚಿಸಿ ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಿದೆ. ಆದರೆ, ರಾಜ್ಯ ಸರ್ಕಾರ ಅನ್ನದಾತನ ಶ್ರಮಕ್ಕೆ ತಣ್ಣೀರು ಎರಚುತ್ತಿದ್ದು, ಈ ಕೃತ್ಯವನ್ನು ನಾನು ಖಂಡಿಸುತ್ತೇನೆ ಎಂದು ಸಿದ್ದರಾಮಯ್ಯ ವಿರುದ್ಧ ಎಕ್ಸ್ ಖಾತೆಯಲ್ಲಿ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ಇನ್ನು ಹಾಲು ಒಕ್ಕೂಟಗಳು ಪ್ರತಿ ಲೀಟರ್ ಹಾಲಿಗೆ ಗರಿಷ್ಠ 30.50 ರೂ.ನೀಡಿ ಖರೀದಿ ಮಾಡುತ್ತಿದ್ದವು. ಆದರೀಗ 1.5 ರೂ. ಕಡಿತಗೊಳಿಸಿ ರೈತರಿಗೆ ಪ್ರತಿ ಲೀಟರ್ಗೆ 28 ರಿಂದ 29 ರೂ.ನೀಡುತ್ತಿವೆ. ಇದು ಹೈನುಗಾರರ ದುರಂತ ಸ್ಥಿತಿ ಎಂದು ಸಚಿವ ಜೋಶಿ ಆತಂಕ ವ್ಯಕ್ತಪಡಿಸಿದ್ದಾರೆ.