ದುಲೀಪ್ ಟ್ರೋಫಿ ಪಂದ್ಯದಿಂದ ಇಶಾನ್ ಕಿಶನ್ ಔಟ್ ಆಗಿದ್ದು, ಬದಲಿ ಆಟಗಾರನಾಗಿ ಸಂಜು ಸ್ಯಾಮ್ಸನ್ಗೆ ಆಯ್ಕೆ ಆಗಿದ್ದಾರೆ.
ದುಲೀಪ್ ಟ್ರೋಫಿ ಟೂರ್ನಿಗೆ ಹೆಸರಿಲಾದ 4 ತಂಡಗಳಲ್ಲಿ ಇಶಾನ್ ಕಿಶನ್ ಟೀಮ್ ಡಿ ನಲ್ಲಿ ಸ್ಥಾನ ಪಡೆದಿದ್ದರು. ಶ್ರೇಯಸ್ ಅಯ್ಯರ್ ನಾಯಕತ್ವದ ಈ ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಇಶಾನ್ ಆಯ್ಕೆಯಾಗಿದ್ದರು. ಇದೀಗ ಗಾಯಗೊಂಡಿರುವ ಕಾರಣ ಸೆಪ್ಟೆಂಬರ್ 5 ರಿಂದ ಶುರುವಾಗಲಿರುವ ಮೊದಲ ಪಂದ್ಯಕ್ಕೆ ಅವರು ಅಲಭ್ಯರಾಗುವ ಸಾಧ್ಯತೆ ಹೆಚ್ಚಿದೆ.
ಅತ್ತ ದುಲೀಪ್ ಟ್ರೋಫಿ ಟೂರ್ನಿಗೆ ಆಯ್ಕೆಯಾಗದಿದ್ದ ಕೇರಳದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ಗೆ ಇದೀಗ ಬದಲಿ ಆಟಗಾರನಾಗಿ ಬುಲಾವ್ ಸಿಗುವ ಸಾಧ್ಯತೆಯಿದೆ. ಅದರಂತೆ ಸೆಪ್ಟೆಂಬರ್ 5 ರಿಂದ ಅನಂತಪುರದ ರೂರಲ್ ಡೆವಲಪ್ಮೆಂಟ್ ಟ್ರಸ್ಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಟೀಮ್ ಸಿ ಮತ್ತು ಟೀಮ್ ಡಿ ನಡುವಣ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಕಾಣಿಸಿಕೊಳ್ಳಬಹುದು.