ನವದೆಹಲಿ: ಖ್ಯಾತ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಈ ಬೆನ್ನಲ್ಲೇ ಚುನಾವಣೆ ಸ್ಫರ್ಧೆ ಬಗ್ಗೆ ಬಿಸಿಬಿಸಿ ಚರ್ಚೆ ಶುರುವಾಗಿದೆ. ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಬೆನ್ನಲ್ಲೇ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರನ್ನೂ ಭೇಟಿಯಾಗಿದ್ದು ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಇಬ್ಬರಿಗೂ ಕಾಂಗ್ರೆಸ್ ಟಿಕೆಟ್ ನೀಡಬಹುದು ಎನ್ನಲಾಗುತ್ತಿದೆ.
https://x.com/INCIndia/status/1831203808241647919?ref_src=twsrc%5Etfw%7Ctwcamp%5Etweetembed%7Ctwterm%5E1831203808241647919%7Ctwgr%5E88ae425990f0508d5ae1e190a0a010ca93b2c939%7Ctwcon%5Es1_&ref_url=https%3A%2F%2Fpublictv.in%2Fvinesh-phogat-bajrang-punia-to-contest-haryana-polls-as-congress-candidates%2F
ಆದರೆ ಪುನಿಯಾ ಮತ್ತು ಫೋಗಟ್ ಅವರನ್ನು ಚುನಾವಣಾ ಕಣದಲ್ಲಿ ಕಣಕ್ಕಿಳಿಸಬಹುದೇ ಅಥವಾ ಇಲ್ಲವೇ ಎಂಬ ಬಗ್ಗೆ ಕಾಂಗ್ರೆಸ್ ಮೌನವಹಿಸಿದ್ದು ಗುರುವಾರದ ವೇಳೆಗೆ ಸ್ಪಷ್ಟತೆ ಸಿಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ವಿನೇಶ್ ಫೋಗಟ್ ಅವರು ಜನನಾಯಕ್ ಜನತಾ ಪಕ್ಷದ ಅಮರ್ಜೀತ್ ಧಂಡಾ ವಿರುದ್ಧ ಜೂಲಾನಾ ಕ್ಷೇತ್ರದಿಂದ ಸ್ಪರ್ಧಿಸುವ ನಿರೀಕ್ಷೆಯಿದೆ. ಬಜರಂಗ್ ಪುನಿಯಾ ಅವರು ಸ್ಪರ್ಧೆ ಮಾಡಲಿರುವ ಕ್ಷೇತ್ರದ ಬಗ್ಗೆ ಇನ್ನೂ ತಿಳಿದುಬಂದಿಲ್ಲ ಎನ್ನಲಾಗಿದೆ. ಈ ಬಗ್ಗೆ ಕುಸ್ತಿಪಟುಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ವಾಹನ ಸವಾರರ ಗಮನಿಸಿ.. ಸೆ.15 ರೊಳಗೆ `HSRP’ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಫಿಕ್ಸ್!
ಸದ್ಯ ಕಾಂಗ್ರೆಸ್ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್ನಲ್ಲಿ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರೊಂದಿಗೆ ರಾಹುಲ್ ಗಾಂಧಿಯವರ ಚಿತ್ರವನ್ನು ಪೋಸ್ಟ್ ಮಾಡಿದೆ. ಪುನಿಯಾ ಮತ್ತು ಫೋಗಟ್ ಅವರು 2023 ರಲ್ಲಿ ಬಿಜೆಪಿಯ ಮಾಜಿ ಸಂಸದ ಮತ್ತು ಆಗಿನ ಭಾರತೀಯ ಕುಸ್ತಿ ಫೆಡರೇಷನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳ ಮಾಡಿದ್ದರು. ಬ್ರಿಜ್ ಭೂಷಣ್ ವಜಾಕ್ಕೆ ಆಗ್ರಹಿಸಿ ದೆಹಲಿಯ ಜಂತರ್-ಮಂತರ್ನಲ್ಲಿ ಪ್ರತಿಭಟನೆ ನಡೆಸಿದ್ದರು.