ಬೆಂಗಳೂರು:- ಕಾಂಗ್ರೆಸ್ ಭ್ರಷ್ಟಾಚಾರದ ಹಡಗು, ಸಿದ್ದರಾಮಯ್ಯ ರಾಜೀನಾಮೆ ಖಚಿತ ಎಂದು ಬಿಜೆಪಿ ನಾಯಕ ಬಿವೈ ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ.
Crime News: ದೇವಸ್ಥಾನದ ಕಟ್ಟೆ ಮೇಲೆ ಮಲಗಿದ್ದ ವ್ಯಕ್ತಿಯ ಬರ್ಬರ ಹತ್ಯೆ..! ಬೆಚ್ಚಿಬಿದ್ದ ಬೆಳಗಾವಿ ಜನತೆ
ಕಾಂಗ್ರೆಸ್ ಎಂದರೆ ಅದು ಅಧಿಕಾರದಿಂದ, ಅಧಿಕಾರಕ್ಕೋಸ್ಕರ ಇರುವ ಪಕ್ಷ. ಅಧಿಕಾರ ಇಲ್ಲವೆಂದರೆ ಕಾಂಗ್ರೆಸ್ ಪಕ್ಷದವರು ನೀರಿನಿಂದ ಹೊರಗೆ ಬಿದ್ದ ಮೀನಿನಂತೆ ಚಡಪಡಿಸುತ್ತಾರೆ ಎಂದರು.
ಅವರು, ಅಧಿಕಾರವಿಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಬದುಕಲು ಸಾಧ್ಯವೇ ಇಲ್ಲ. ಬಿಜೆಪಿ ಮತ್ತೊಂದು ಕಡೆ ಸೇವೆಯೇ ಸಂಘಟನೆ ಎಂಬ ಶ್ರೇಷ್ಠ ಭಾವನೆಯಿಂದ ದೇಶ ಮೊದಲು, ನಂತರ ಪಕ್ಷ ಎಂಬ ಉತ್ತಮ ಸಿದ್ಧಾಂತ ಹೊಂದಿದೆ. ಕೋವಿಡ್ ದಿನಗಳಲ್ಲಿ ದೇಶದ ಇತರ ರಾಜಕೀಯ ಪಕ್ಷದವರು ಮನೆಯಲ್ಲಿ ಕೂತಿದ್ದರು. ಆದರೆ ನಮ್ಮ ಪಕ್ಷವು ದೇಶದ ಲಕ್ಷಾಂತರ ಜನರ ಸಂಕಷ್ಟಕ್ಕೆ ಸ್ಪಂದಿಸಿತ್ತು ಎಂದು ವಿವರಣೆ ನೀಡಿದರು.