ರಾಯಚೂರು: ಇಂದು ಶಿಕ್ಷಕರ ದಿನಾಚಣೆ ಹಿನ್ನೆಲೆ ಖುಷಿಯಿಂದ ಹೊರಟಿದ್ದ ವಿದ್ಯಾರ್ಥಿಗಳಿಗೆ ದುಃಖದ ದಿನವಾಗಿ ಮಾರ್ಪಟ್ಟಿದೆ. ಹೌದು ಶಾಲಾ ವಾಹನ ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಶಾಲಾ ಮಕ್ಕಳು ದಾರುಣವಾಗಿ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ನಡೆದಿದೆ.
ಒಂದನೇ ತರಗತಿ ವಿದ್ಯಾರ್ಥಿ ಸಮರ್ಥ, ಏಳನೇ ತರಗತಿ ವಿದ್ಯಾರ್ಥಿ ಶ್ರೀಕಾಂತ್ ಮೃತದುರ್ದೈವಿಗಳು. ಸ್ಕೂಲ್ ಬಸ್ನೊಳಗೆ ಇದ್ದ ಮೂವರು ಮಕ್ಕಳ ಕಾಲುಗಳು ತುಂಡಾಗಿವೆ. ಖಾಸಗಿ ಶಾಲೆಯ ಬಸ್ವೊಂದು ಮಕ್ಕಳನ್ನು ಕರೆದುಕೊಂಡು ಕಪಗಲ್ನಿಂದ ಮಾನ್ವಿ ಕಡೆ ಹೊರಟಿತ್ತು. ಸಾರಿಗೆ ಬಸ್ ಸಿಂಧನೂರು ಕಡೆಯಿಂದ ರಾಯಚೂರು ಕಡೆಗೆ ಹೊರಟ್ಟಿದ್ದಾಗ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಮಕ್ಕಳಿಬ್ಬರ ಕಾಲು ತುಂಡಾಗಿ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.
Teachers Day 2024: ಶಿಕ್ಷಕರ ದಿನಾಚರಣೆಯ ಹಿನ್ನೆಲೆ, ಇತಿಹಾಸ, ಪ್ರಾಮುಖ್ಯತೆ ಗೊತ್ತೇ? ಇಲ್ಲಿದೆ ವಿವರ
ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕುಡಿ ಗ್ರಾಮದ ಓರ್ವ ಬಾಲಕ ಮತ್ತು ಬಾಲಕಿ ಮೃತಪಟ್ಟಿದ್ದಾರೆ. ರಿಮ್ಸ್ ಆಸ್ಪತ್ರೆಗೆ ಎಸ್ಪಿ ಮತ್ತು ಡಿಸಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ರಿಮ್ಸ್ ಆಸ್ಪತ್ರೆ ಮುಂಭಾಗ ಮುಟ್ಟಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಎರಡು ಬಸ್ಗಳ ನಡುವೆ ಅಪಘಾತದಿಂದಾಗಿ ಸಿಂಧನೂರು- ರಾಯಚೂರು ಮಾರ್ಗದ ರಸ್ತೆ ಬಂದ್ ಆಗಿದೆ. ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದೀಗ ಅಪಘಾತದಲ್ಲಿ ಕಾಲು ಕಳೆದುಕೊಂಡಿರುವ ಮಕ್ಕಳ ಸ್ಥಿತಿ ಕಂಡು ಪೋಷಕರು ಅಕ್ರಂದನ. ಸದ್ಯ ಎಲ್ಲ ಮಕ್ಕಳಿಗೂ ಚಿಕಿತ್ಸೆ ಮುಂದುವರಿದಿದೆ.