ಬೆಂಗಳೂರು:- ಮುಡಾ ಹಗರಣ ರಾಷ್ಟ್ರಪತಿ ಅಂಗಳ ತಲುಪಿದೆ. ಮುಡಾ ಹಗರಣದ ವಿಚಾರವಾಗಿ ಪ್ರತಿಭಟನೆಯಿಂದ ರಾಜ್ಯ ಸರ್ಕಾರ, ರಾಜಭವನದ ಮೇಲೆ ನಿರಂತರ ಒತ್ತಡ ಹಾಕಲಾಗುತ್ತಿದೆ ಎಂದು ರಾಜ್ಯಪಾಲ ಥಾವರ್ ಚೆಂದ ಗೆಹ್ಲೋಟ್ ಅವರು ರಾಜ್ಯ ವಿದ್ಯಮಾನಗಳ ಬಗ್ಗೆ ರಾಷ್ಟ್ರಪತಿಗೆ ಮಾಹಿತಿ ರವಾನಸಿದ್ದಾರೆ. ಅಲ್ಲದೇ ಕೇಂದ್ರ ಗೃಹ ಸಚಿವಾಲಯಕ್ಕೂ ಮಾಹಿತಿ ನೀಡಿದ್ದಾರೆ.
Hubballi: ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಎಸ್ ಡಿಪಿಐ ವಿರೋಧ!
ಪ್ರತಿಭಟನೆಯೊಂದಾಗಿ ಸಾರ್ವಜನಿಕ ಸಮಾರಂಭಗಳಿಗೆ ಹಾಜರಾಗದಂತಗ ದಿಗ್ಬಂಧನ ಸ್ಥಿತಿ ನಿರ್ಮಾಣವಾಗಿದೆ. ಗುಪ್ತಚರ ಇಲಾಖೆ ಸಲಹೆಯಂತೆ ಬುಲೆಟ್ಪ್ರೂಫ್ ಕಾರು ಬಳಕೆ ಮಾಡುತ್ತಿದ್ದೇನೆ.
ಕೆಲ ಸಚಿವರು ಉದ್ದೇಶಪೂರ್ವಕವಾಗಿ ಕರ್ನಾಟಕ ವಿರೋಧಿ ರಾಜ್ಯಪಾಲರು, ಗೋಬ್ಯಾಕ್ ಗವರ್ನರ್ ಚಳವಳಿ ನಡೆಸಿದ್ದಾರೆ ಎಂಬ ಅಂಶಗಳನ್ನೊಳಗೊಂಡ ವರದಿಯನ್ನು ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ರಾಷ್ಟ್ರಪತಿ ಹಾಗೂ ಕೇಂದ್ರ ಗೃಹಸಚಿವಾಲಯಕ್ಕೆ ರವಾನಿಸಿದ್ದಾರೆ.
ಮುಡಾ ವಿಚಾರವಾಗಿ ರಾಜ್ಯದಲ್ಲಿ ಪ್ರತಿಭಟನೆ ಮೂಲಕ ರಾಜ್ಯ ಸರ್ಕಾರ, ರಾಜಭವನದ ಮೇಲೆ ನಿರಂತರ ಒತ್ತಡ ಹೇರುತ್ತಿದೆ. ರಾಜ್ಯಾದ್ಯಂತ ವ್ಯಾಪಕ ಪ್ರತಿಭಟನೆ, ಹಲವೆಡೆ ತಮ್ಮ ಪ್ರತಿಕೃತಿ ದಹನ ಮಾಡಲಾಗಿದೆ. ಸಾಲದಕ್ಕೆ ಕಾಂಗ್ರೆಸ್ ನಾಯಕರಿಂದ ರಾಜಭವನಕ್ಕೆ ನುಗ್ಗುವ ಬೆದರಿಕೆ ಇದೆ ಎಂದು ವರದಿಯಲ್ಲಿ ರಾಜ್ಯಪಾಲರು ಉಲ್ಲೇಖಿಸಿದ್ದಾರೆ.