ವಿಜಯಪುರ:- ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ರಸ್ತೆ ಬದಿ ನಿಂತಿದ್ದವರ ಮೇಲೆ ಬೈಕ್ ಹರಿದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜರುಗಿದೆ.
ಸರ್ಕಾರಿ ಕೆಲಸ, ಕೈ ತುಂಬಾ ಸಂಬಳ: ನಿಮಗೂ ಈ ಜಾಬ್ ಬೇಕಾ!?, ಕೂಡಲೇ ಇಲ್ಲಿ ಅಪ್ಲೈ ಮಾಡಿ!
ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಬೈಕ್ ಸವಾರ ನಿಂಗರಾಜ ಚೌಧರಿ (22), ದೇವರಹಿಪ್ಪರಗಿ ತಾಲೂಕಿನ ಹಂಚಲಿ ಗ್ರಾಮದ ನಿವಾಸಿ ಅನೀಲ ಖೈನೂರ (23) ಮುದ್ದೇಬಿಹಾಳ ತಾಲೂಕಿನ ಮಲಗಲದಿನ್ನಿ ಗ್ರಾಮದ ನಿವಾಸಿ ಉದಯಕುಮಾರ ಪ್ಯಾಟಿ (19) ಮೃತದುರ್ದೈವಿಗಳು ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.